ಪಂಚಮಸಾಲಿ ಪೀಠ ಸಂಘರ್ಷ: ಮೂವರು ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ – Kannada News | Harihara Panchamasali Gurupeeth conflict: three Trustees Expelled
ದಾವಣಗೆರೆ, ಏಪ್ರಿಲ್ 26: ಪಂಚಮಸಾಲಿ ಗುರುಪೀಠ ಟ್ರಸ್ಟ್‌ನ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ, ಧರ್ಮದರ್ಶಿ ಚಂದ್ರಶೇಖರ್ ಪೂಜಾರ್ ಮತ್ತು ಕಾರ್ಯದರ್ಶಿ ಜ್ಯೋತಿ ಪ್ರಕಾಶ್ ಅವರನ್ನು ಟ್ರಸ್ಟ್‌ನಿಂದ ಉಚ್ಚಾಟನೆ ಮಾಡಲಾಗಿದೆ. ಲೆಕ್ಕಪತ್ರ ನೀಡುವಂತೆ ಸಾರ್ವಜನಿಕ ಮತ್ತು ಸಂಘದ ವತಿಯಿಂದ ನಿರಂತರವಾಗಿ ಕೇಳಲಾಗಿದ್ದರೂ ಸಹ, ಅವರು ಸ್ಪಂದಿಸದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಏಪ್ರಿಲ್ 13ರಿಂದ ಈ ಮೂವರು ಟ್ರಸ್ಟಿಗಳಿಗೆ ಯಾವುದೇ ಹಣಕಾಸು ವ್ಯವಹಾರ ಅಥವಾ ನಿರ್ಧಾರ ಕೈಗೊಳ್ಳುವ ಅಧಿಕಾರ ಇರುವುದಿಲ್ಲ ಎಂದು ಪಂಚಮಸಾಲಿ ರಾಜ್ಯ ಸಂಘದ ಅಧ್ಯಕ್ಷ ಸೋಮನಗೌಡ…