ಬೆಳಗಾವಿಯಲ್ಲಿ ಮಧ್ಯರಾತ್ರಿ ವಕೀಲೆಯ ಮನೆ ಮೇಲೆ ಗುಂಡಿನ ದಾಳಿ; ರೂಮ್ನಲ್ಲಿ ಓದುತ್ತಿದ್ದ ಪುತ್ರಿ ಕೂದಲೆಳೆ ಅಂತರದಲ್ಲಿ ಪಾರು! – Kannada News | Belagavi Advocate Pooja Kakatkar’s Home Shot At; Daughter Narrowly Escapes Firing
ಮಧ್ಯರಾತ್ರಿ ವಕೀಲೆಯ ಮನೆ ಮೇಲೆ ಗುಂಡಿನ ದಾಳಿ ಬೆಳಗಾವಿ, ಏ.26: ಕುಂದಾನಗರಿ ಬೆಳಗಾವಿಯಲ್ಲಿ ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವಂತಹ ಘಟನೆಯೊಂದು ನಡೆದಿದೆ. ನಗರದ ಮಂಡೋಳಿ ರಸ್ತೆಯಲ್ಲಿರುವ ಖ್ಯಾತ ವಕೀಲೆ ಪೂಜಾ ಕಾಕತಕರ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಇಡೀ ನಗರದಲ್ಲಿ ಆತಂಕ ಮನೆ ಮಾಡಿದೆ. ಶನಿವಾರ ಮಧ್ಯರಾತ್ರಿ ಸುಮಾರು 1 ರಿಂದ 2 ಗಂಟೆಯ ಸುಮಾರಿನಲ್ಲಿ ಈ ದಾಳಿ ನಡೆದಿದೆ. ದುಷ್ಕರ್ಮಿಗಳು ಪೂಜಾ ಅವರ ಮನೆಯ ಮೊದಲ ಮಹಡಿಯನ್ನು ಗುರಿಯಾಗಿಸಿಕೊಂಡು ಫೈರಿಂಗ್ ನಡೆಸಿದ್ದಾರೆ….