ಉಡುಪಿ: ಸಿಟಿ ಬಸ್ ನಿಲ್ದಾಣದ ಮುಂದೆಯೇ ಹೊತ್ತಿ ಉರಿದ ಕಟ್ಟಡ; ಮೊಬೈಲ್, ಹಾರ್ಡ್‌ವೇರ್ ಮಳಿಗೆಗಳು ಸುಟ್ಟು ಭಸ್ಮ! – Kannada News | Major Fire at Udupi’s Khadar Commercial Complex: Shops Gutted, Short Circuit Suspected
ಉಡುಪಿ, ಏ.26: ನಗರದ ಪ್ರಮುಖ ವಾಣಿಜ್ಯ ಪ್ರದೇಶವಾದ ಸಿಟಿ ಬಸ್ ನಿಲ್ದಾಣದ ಸಮೀಪವಿರುವ ‘ಖಾದರ್ ಕಮರ್ಷಿಯಲ್’ ಸಂಕೀರ್ಣದಲ್ಲಿ ಇಂದು ಭಾರಿ ಅಗ್ನಿ ಅವಘಡ ಸಂಭವಿಸಿದೆ. ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಕಟ್ಟಡಕ್ಕೆ ವ್ಯಾಪಿಸಿದ್ದು, ವ್ಯಾಪಾರಿಗಳು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಖಾದರ್ ಕಮರ್ಷಿಯಲ್ ಕಟ್ಟಡದಲ್ಲಿರುವ ಮೊಬೈಲ್ ಅಂಗಡಿ ಮತ್ತು ಹಾರ್ಡ್‌ವೇರ್ ಮಳಿಗೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಹಾರ್ಡ್‌ವೇರ್ ಅಂಗಡಿಯಲ್ಲಿದ್ದ ಸುಡುವ ಪದಾರ್ಥಗಳಿಂದಾಗಿ ಬೆಂಕಿ ತೀವ್ರವಾಗಿ ಹರಡಿದ್ದು, ದಟ್ಟವಾದ ಹೊಗೆ ಇಡೀ ಪ್ರದೇಶವನ್ನು ಆವರಿಸಿಕೊಂಡಿತ್ತು. ಪರಿಣಾಮವಾಗಿ ಮೊಬೈಲ್…