ನೀಟ್ ಪರೀಕ್ಷೆಗಳು ವಿಳಂಬವಾಗಿರುವುದರಿಂದ, ಮೆಡಿಕಲ್, ಡೆಂಟಲ್ ಮತ್ತು ಆಯುಷ್ ಕೋರ್ಸ್‌ಗಳ ಸೀಟು ಹಂಚಿಕೆ ಎರಡನೇ ಸುತ್ತಿನಲ್ಲಿ ನಡೆಯಲಿದೆ. ಎಂಸಿಸಿ ಮತ್ತು ಮೆಡಿಕಲ್ ಎಜುಕೇಶನ್ ವಿಭಾಗದಿಂದ ಸೀಟ್ ಮ್ಯಾಟ್ರಿಕ್ಸ್ ಲಭ್ಯವಾದ ನಂತರ ಈ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ
ವೈದ್ಯಕೀಯ ಸೀಟು ಮಾತ್ರ ಬಯಸುವ ವಿದ್ಯಾರ್ಥಿಗಳು ಎರಡನೇ ಸುತ್ತಿಗಾಗಿ ಕಾಯಬಹುದು. ಆದರೆ, ವೈದ್ಯಕೀಯ ಸೀಟು ದೊರೆಯದಿದ್ದಲ್ಲಿ ಇಂಜಿನಿಯರಿಂಗ್ ಅಥವಾ ಇತರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮೊದಲ ಸುತ್ತಿನ ಆಪ್ಷನ್ ಎಂಟ್ರಿಯಲ್ಲಿ ಭಾಗವಹಿಸಬೇಕು ಎಂದು ಪ್ರಸನ್ನ ಅವರು ಸ್ಪಷ್ಟಪಡಿಸಿದ್ದಾರೆ. ಹೀಗೆ ಭಾಗವಹಿಸಿದ ವಿದ್ಯಾರ್ಥಿಗಳು ಎರಡನೇ ಸುತ್ತಿನಲ್ಲಿ ವೈದ್ಯಕೀಯ ಆಯ್ಕೆಗಳನ್ನು ಸೇರಿಸಿ ಪುನರ್ವ್ಯವಸ್ಥೆ ಮಾಡಿಕೊಳ್ಳುವ ಅವಕಾಶವನ್ನು ಪಡೆಯಲಿದ್ದಾರೆ. ಕೆಇಎ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ವ್ಯವಸ್ಥೆಯನ್ನು ರೂಪಿಸಿದೆ ಎಂದು ಅವರು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:
