ಪ್ಯಾರಾಮೆಡಿಕಲ್ ಹುದ್ದೆಗಳ ನೇಮಕಾತಿ
ಕೇಂದ್ರ ಗೃಹ ಸಚಿವಾಲಯದ ಒಳಪಡುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯು (CISF) ಪ್ಯಾರಾಮೆಡಿಕಲ್ (ಅರೆವೈದ್ಯಕೀಯ) ಸಿಬ್ಬಂದಿ ಭರ್ತಿಗೆ ಹೊಸ ಅಧಿಸೂಚನೆಯನ್ನು ಹೊರಡಿಸಿದೆ. ರಕ್ಷಣಾ ಪಡೆಯಲ್ಲಿ ಅರೆವೈದ್ಯಕೀಯ ಸೇವೆ ಸಲ್ಲಿಸಲು ಬಯಸುವ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯ ಅಡಿಯಲ್ಲಿ ಫಾರ್ಮಾಸಿಸ್ಟ್ ಹುದ್ದೆಗೆ 18, ಲ್ಯಾಬ್ ಟೆಕ್ನಿಷಿಯನ್ ಹುದ್ದೆಗೆ 05 ಮತ್ತು ಎಕ್ಸ್‌ರೇ ಟೆಕ್ನಿಷಿಯನ್ ಹುದ್ದೆಗೆ 01 ಸೇರಿದಂತೆ ವಿವಿಧ ಹುದ್ದೆಗಳನ್ನು ವರ್ಗೀಕರಿಸಲಾಗಿದೆ.
ಅಗತ್ಯವಿರುವ ಶೈಕ್ಷಣಿಕ ಅರ್ಹತೆಗಳು:
ವಿವಿಧ ಹುದ್ದೆಗಳಿಗೆ ಪ್ರತ್ಯೇಕ ಶೈಕ್ಷಣಿಕ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ. ಫಾರ್ಮಾಸಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿ ವಿಜ್ಞಾನ ವಿಭಾಗದಲ್ಲಿ ತೇರ್ಗಡೆಯಾಗಿದ್ದು, ಫಾರ್ಮಸಿಯಲ್ಲಿ ಡಿಪ್ಲೊಮಾ ಅಥವಾ ಪದವಿ ಮುಗಿಸಿ ಫಾರ್ಮಸಿ ಕೌನ್ಸಿಲ್‌ನಲ್ಲಿ ಕಡ್ಡಾಯವಾಗಿ ನೋಂದಣಿಯಾಗಿರಬೇಕು. ಲ್ಯಾಬ್ ಟೆಕ್ನಿಷಿಯನ್ ಹುದ್ದೆಗೆ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾಗಿ 2 ವರ್ಷಗಳ ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞಾನ ಡಿಪ್ಲೊಮಾ ಮುಗಿಸಿರಬೇಕು. ಇನ್ನು ಎಕ್ಸ್‌ರೇ ಟೆಕ್ನಿಷಿಯನ್ ಹುದ್ದೆಗೆ ಅಭ್ಯರ್ಥಿಗಳು ರೇಡಿಯೋಗ್ರಫಿಯಲ್ಲಿ ಕನಿಷ್ಠ 2 ವರ್ಷಗಳ ಡಿಪ್ಲೊಮಾ ಹೊಂದಿರಬೇಕಾದುದು ಅತ್ಯಗತ್ಯವಾಗಿದೆ.
ವಯೋಮಿತಿ ಮತ್ತು ವೇತನ ಶ್ರೇಣಿ:
2026ರ ಜೂನ್ 7ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 28 ವರ್ಷ ಮೀರಿರಬಾರದು. ಸರ್ಕಾರದ ನಿಯಮಾವಳಿಗಳ ಪ್ರಕಾರ ವಯೋಸಡಿಲಿಕೆ ಇದ್ದು, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಸಡಿಲಿಕೆ ನೀಡಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂ. 29,200 ರಿಂದ ರೂ. 92,300 ರವರೆಗೆ ವೇತನ ನಿಗದಿಪಡಿಸಲಾಗಿದ್ದು, ಇದರೊಂದಿಗೆ ಇತರೆ ಭತ್ಯೆಗಳೂ ಲಭ್ಯವಿರುತ್ತವೆ.
ಅಭ್ಯರ್ಥಿಗಳ ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳನ್ನು ವಿವಿಧ ಹಂತಗಳ ಕಠಿಣ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಮೊದಲಿಗೆ ಲಿಖಿತ ಪರೀಕ್ಷೆ ಮತ್ತು ದೈಹಿಕ ಗುಣಮಟ್ಟ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಈ ಹಂತಗಳಲ್ಲಿ ಉತ್ತೀರ್ಣರಾದವರ ಮೂಲ ದಾಖಲಾತಿಗಳ ಪರಿಶೀಲನೆ ಹಾಗೂ ವೃತ್ತಿಪರ ಕೌಶಲ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಕೊನೆಯದಾಗಿ ಈ ಎಲ್ಲಾ ಪ್ರಕ್ರಿಯೆಗಳಲ್ಲಿ ಅರ್ಹತೆ ಪಡೆದವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಮೂಲಕ ಅಂತಿಮವಾಗಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: ಲಿಖಿತ ಪರೀಕ್ಷೆಯಿಲ್ಲದೆ ಸಿಗಲಿದೆ ತಿಂಗಳಿಗೆ 2.25 ಲಕ್ಷ ರೂ. ಸಂಬಳದ ಉದ್ಯೋಗ! ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಶುಲ್ಕ ಮತ್ತು ಸಲ್ಲಿಕೆ ವಿಧಾನ:
ಅರ್ಜಿ ಸಲ್ಲಿಸಲು ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ರೂ. 100 ಶುಲ್ಕ ನಿಗದಿಪಡಿಸಲಾಗಿದೆ. ಆದರೆ ಎಸ್‌ಸಿ, ಎಸ್‌ಟಿ, ಮಾಜಿ ಸೈನಿಕರು ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಆಸಕ್ತ ಅಭ್ಯರ್ಥಿಗಳು ಸಿಐಎಸ್‌ಎಫ್‌ನ ಅಧಿಕೃತ ನೇಮಕಾತಿ ಪೋರ್ಟಲ್ ಆದ cisfrectt.cisf.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಶಾರ್ಟ್ ಲಿಂಕ್ (shorturl.at/bvxfx) ಅಧಿಸೂಚನೆಯನ್ನು ಗಮನಿಸಬಹುದು.
ಕೊನೆಯ ದಿನಾಂಕದ ಎಚ್ಚರಿಕೆ:
ಈ ಪ್ಯಾರಾಮೆಡಿಕಲ್ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ07 ಆಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನದ ಗಡುವಿನ ಒಳಗಾಗಿ ತಮ್ಮ ಎಲ್ಲಾ ದಾಖಲೆಗಳೊಂದಿಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಯಶಸ್ವಿಯಾಗಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
