ದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ. ನೀಟ್ ಪರೀಕ್ಷಾ ಅಕ್ರಮದ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ. ಜಂತರ್‌ಮಂತರ್‌ನಲ್ಲಿ ನಡೆಯುತ್ತಿದ್ದ ಸಿಜೆಪಿ ಪ್ರತಿಭಟನೆಯ ಸ್ಥಳದಲ್ಲಿ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಕಾರ್ಯಕರ್ತರ ಸಡಗರ ಇಮ್ಮಡಿಯಾಗಿದೆ. ಸಿಜೆಪಿ ಸಂಸ್ಥಾಪಕ ಅಭೀಜಿತ್ ದೀಪ್ಕೆ ಸೇರಿದಂತೆ ಹಲವು ಕಾರ್ಯಕರ್ತರು ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ