
ಬೆಂಗಳೂರು, (ಮೇ 30): ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ.ಶಿವಕುಮಾರ್ ಅವರು ಸರ್ವಾನುಮತದಿಂದ ಆಯ್ಕೆ ಆಗಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ನೂತನ ಆಯ್ಕೆ ನಡೆಯಿತು. ಹೊಸ ಶಾಸಕಾಂಗ ಪಕ್ಷದ ನಾಯಕರಾಗಿ ಡಿ ಕೆ ಶಿವಕುಮಾರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದರು. ಡಾ. ಜಿ ಪರಮೇಶ್ವರ್ ಅವರು ಅನುಮೋದಿಸಿದರು. ಇದನ್ನು ಸಭೆಯು ಒಕ್ಕೊರಲಿನಿಂದ ಬೆಂಬಲಿಸಿತು. ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ , ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ.ಶಿವಕುಮಾರ್ ಆಯ್ಕೆಯಾಗಿದ್ದಾರೆ ಎಂದು ಅವರು ಘೋಷಿಸಿದರು. ಇನ್ನು ಸಿಎಲ್ಪಿ ಸಭೆಯಲ್ಲಿ ಏನೆಲ್ಲಾ ಆಯ್ತು ಎನ್ನುವ ವಿಡಿಯೋ ನೋಡಿ.
ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.