ಕರ್ನಾಟಕದ 25ನೇ ಸಿಎಂ ಆಗಿ ಡಿಕೆಶಿ ಪ್ರಮಾಣವಚನImage Credit source: PTI
ಬೆಂಗಳೂರು, ಜೂನ್ 03: ಕರ್ನಾಟಕದ 25 ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದ್ದು, ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಸಾಂಪ್ರದಾಯಿಕ ಉಡುಗೆಯಲ್ಲಿ ಶಿವಕುಮಾರ್ ಕಾಣಿಸಿಕೊಂಡಿರೋದು ಗಮನಸೆಳೆಯಿತು.
ಮುಖ್ಯಾಂಶಗಳು
- ಕರ್ನಾಟಕದ 25ನೇ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
- ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದ ರಾಜ್ಯಪಾಲ ಗೆಹ್ಲೋಟ್
- ಬೆಂಗಳೂರಿನ ರಾಜಭವನದಲ್ಲಿ ಸರಳವಾಗಿ ನಡೆದ ಕಾರ್ಯಕ್ರಮ
ಕಾರ್ಯಕ್ರಮದಲ್ಲಿ ಗಣ್ಯಾತಿ ಗಣ್ಯರು ಭಾಗಿ
ಸಿಎಂ ಆಗಿ ಡಿಕೆಶಿ ಪ್ರಮಾಣವಚನಕ್ಕೆ ಗಣ್ಯಾತಿ ಗಣ್ಯರು ಸಾಕ್ಷಿಯಾಗಿದ್ದಾರೆ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ, ತೆಲಂಗಾಣ ಸಿಎಂ ರೇವಂತ್ ರೆಡ್ಡಿ
ಕೇರಳಂ ಸಿಎಂ ಸತೀಶನ್, ಕಾಂಗ್ರೆಸ್ ನಾಯಕರಾದ ಹರಿಪ್ರಸಾದ್, ಮೊಹಮ್ಮದ್ ಅಜರುದ್ದೀನ್, ರಾಜೀವ್ ಶುಕ್ಲಾ ಸೇರಿ ಪಕ್ಷದ ಪ್ರಮುಖ ನಾಯಕರು ಮತ್ತು ಜನಪ್ರತಿನಿಧಿಗಳು, ವಿವಿಧ ಮಠಾಧೀಶರು, ಮೌಲ್ವಿಗಳು, ಮತ್ತು ಚರ್ಚ್ಗಳ ಮುಖ್ಯಸ್ಥರು, ಸಿನಿ ತಾರೆಯರು ಸೇರಿ ಡಿಕೆಶಿ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಬಿಜೆಪಿಯ ಉಚ್ಛಾಟಿತ ಶಾಸಕರಾದ ಶಿವರಾಮ ಹೆಬ್ಬಾರ್ ಮತ್ತು ಎಸ್.ಟಿ.ಸೋಮಶೇಖರ್ ಕೂಡ ಈ ವೇಳೆ ಕಾಣಿಸಿಕೊಂಡಿರೋದು ವಿಶೇಷವಾಗಿತ್ತು.
ಇದನ್ನೂ ಓದಿ: ಡಿಕೆ ಶಿವಕುಮಾರ್ ಸಿಎಂ, ಪರಮೇಶ್ವರ್-ಡಿಸಿಎಂ; ಇಲ್ಲಿದೆ ಹೊಸ ಸಚಿವರ ಅಧಿಕೃತ ಲಿಸ್ಟ್
ಪ್ರಮಾಣವಚನಕ್ಕೂ ಮುನ್ನ ವಿಶೇಷ ಪೂಜೆ
ಕರ್ನಾಟಕದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದಲ್ಲಿರುವ ನಿವಾಸದಲ್ಲಿ 5ಕ್ಕೂ ಹೆಚ್ಚು ಪುರೋಹಿತರಿಂದ ವಿಶೇಷ ಪೂಜೆ ನೆರವೇರಿಸಲಾಗಿತ್ತು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On – 4:16 pm, Wed, 3 June 26
