
ಐಪಿಎಲ್ 2026 ರ 37 ನೇ ಪಂದ್ಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು MA ಚಿದಂಬರಂ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಸಿಎಸ್ಕೆ ತನ್ನ ತವರು ಮೈದಾನದಲ್ಲಿ ಈ ಪಂದ್ಯವನ್ನು ಆಡುತ್ತಿದ್ದರಿಂದ ತವರಿನ ಲಾಭ ಪಡೆದು ಈ ಪಂದ್ಯವನ್ನು ಗೆಲ್ಲಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಸಿಎಸ್ಕೆ ಲೆಕ್ಕಾಚಾರವನ್ನು ಪಂದ್ಯದ ಆರಂಭದಲ್ಲೇ ಗುಜರಾತ್ ತಂಡ ಬುಡಮೇಲು ಮಾಡಿತು. ಈ ಪಂದ್ಯದಲ್ಲಿ ಟಾಸ್ ಸೋತ ಸಿಎಸ್ಕೆ ಮೊದಲು ಬ್ಯಾಟಿಂಗ್ ಮಾಡಬೇಕಾಯಿತು. ಆದರೆ ತಂಡದ ಕಳಪೆ ಬ್ಯಾಟಿಂಗ್ನಿಂದಾಗಿ ಕೇವಲ 158 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಈ ಗುರಿ ಬೆನ್ನಟ್ಟಿದ ಗುಜರಾತ್ ಕೇವಲ 2 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಮುಟ್ಟಿತು.