
ಇಂಡಿಯನ್ ಪ್ರೀಮಿಯರ್ ಲೀಗ್ನ 21ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಉಭಯ ತಂಡಗಳು ಆರಂಭಿಕ ಪಂದ್ಯಗಳಲ್ಲಿ ಹೀನಾಯ ಪ್ರದರ್ಶನ ನೀಡಿದೆ. ಇತ್ತ ಸಿಎಸ್ಕೆ ತಂಡವು ಈವರೆಗೆ ಆಡಿದ 4 ಮ್ಯಾಚ್ಗಳಲ್ಲಿ ಗೆದ್ದಿರುವುದು ಒಂದು ಪಂದ್ಯ ಮಾತ್ರ. ಅತ್ತ ಕೆಕೆಆರ್ ತಂಡವು ಇನ್ನೂ ಸಹ ಗೆಲುವಿನ ಖಾತೆ ತೆರೆದಿಲ್ಲ. ಹೀಗಾಗಿ ಸಿಎಸ್ಕೆ ತಂಡವು ಗೆಲುವಿನ ಲಯ ಮುಂದುವರೆಸಬೇಕಿದ್ದರೆ ಇಂದಿನ ಪಂದ್ಯದಲ್ಲಿ ಜಯ ಸಾಧಿಸಬೇಕು. ಅತ್ತ ಕೆಕೆಆರ್ ತಂಡವು ಈ ಪಂದ್ಯದ ಮೂಲಕ ಗೆಲುವಿನ ಖಾತೆ ತೆರೆಯುವ ಇರಾದೆಯಲ್ಲಿದೆ.
ಇನ್ನು ಉಭಯ ತಂಡಗಳು ಐಪಿಎಲ್ನಲ್ಲಿ ಈವರೆಗೆ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಗೆದ್ದಿರುವುದು ಕೇವಲ 11 ಮ್ಯಾಚ್ಗಳಲ್ಲಿ ಮಾತ್ರ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿದ್ದವು. ಇದೀಗ ಬಲಿಷ್ಠತೆಯಲ್ಲಿ ಸಮಬಲ ಹೊಂದಿರುವುದರಿಂದ ಇಂದಿನ ಮ್ಯಾಚ್ನಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.