CSK vs LSG: ಸಿಎಸ್​ಕೆಗೆ ಮಾಡು ಇಲ್ಲವೇ ಮಡಿ ಪಂದ್ಯ; ಗೆದ್ದರಷ್ಟೇ ಉಳಿಗಾಲ – Kannada News | IPL 2026: CSK vs LSG Playoff Decider – Do or Die Battle for Chennai Super Kings!

ಐಪಿಎಲ್ 2026 (IPL 2026) ರ ಮೇ 10 ರಂದು ಡಬಲ್ ಹೆಡರ್ ಪಂದ್ಯಗಳು ನಡೆಯಲಿವೆ. ಅಂದರೆ ಒಂದೇ ದಿನ ಎರಡು ಪಂದ್ಯಗಳು ನಡೆಯಲಿವೆ. ದಿನದ ಮೊದಲ ಪಂದ್ಯವು ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (CSK vs LSG) ನಡುವೆ ನಡೆಯಲಿದೆ. ಪ್ಲೇಆಫ್‌ ದೃಷ್ಟಿಯಿಂದ ಈ ಪಂದ್ಯ ಉಭಯ ತಂಡಗಳಿಗೆ ಬಹು ಮುಖ್ಯವಾಗಿದೆ. ಅದರಲ್ಲೂ ಸಿಎಸ್​ಕೆ ತಂಡಕ್ಕೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಸಿಎಸ್​ಕೆ ಗೆದ್ದರಷ್ಟೇ ಪ್ಲೇಆಫ್‌ ರೇಸ್​ನಲ್ಲಿ ಜೀವಂತವಾಗಿರಲಿದೆ. ಇಲ್ಲದಿದ್ದರೆ ತಂಡದ ಪ್ರಯಾಣ ಲೀಗ್ ಹಂತದಲ್ಲೇ ಅಂತ್ಯವಾಗಲಿದೆ.

ಸಿಎಸ್​ಕೆಗೆ ಮಾಡು ಇಲ್ಲವೇ ಮಡಿ ಪಂದ್ಯ

ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪಾಯಿಂಟ್ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಇದುವರೆಗೆ ಆಡಿರುವ 10 ಪಂದ್ಯಗಳಲ್ಲಿ ಐದರಲ್ಲಿ ಗೆದ್ದು, ಐದು ಪಂದ್ಯಗಳಲ್ಲಿ ಸೋತಿದೆ. ಪ್ರಸ್ತುತ ಸಿಎಸ್‌ಕೆ ತಂಡವು ಅತ್ಯುತ್ತಮ ಫಾರ್ಮ್ ಹೊಂದಿದ್ದು, ಕಳೆದ ಎರಡು ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ತಲಾ ಎಂಟು ವಿಕೆಟ್‌ಗಳಿಂದ ಜಯಗಳಿಸಿದೆ. ಇತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡವು ಆಡಿದ 10 ಪಂದ್ಯಗಳಲ್ಲಿ ಏಳರಲ್ಲಿ ಸೋತು ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆದಾಗ್ಯೂ, ಸತತ ಆರು ಸೋಲುಗಳ ನಂತರ, ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಹಿಂದಿನ ಪಂದ್ಯವನ್ನು ಒಂಬತ್ತು ರನ್‌ಗಳಿಂದ ಗೆದ್ದುಕೊಂಡಿತು.

ಲಕ್ನೋಗೂ ಅವಕಾಶವಿದೆ

ಐಪಿಎಲ್‌ನಲ್ಲಿ ಎರಡೂ ತಂಡಗಳು ಇದುವರೆಗೆ ಆರು ಪಂದ್ಯಗಳನ್ನು ಆಡಿದ್ದು, ಲಕ್ನೋ ಸೂಪರ್ ಜೈಂಟ್ಸ್ ಮೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಎರಡು ಪಂದ್ಯಗಳನ್ನು ಗೆದ್ದಿವೆ. ಒಂದು ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ. ಮುಖಾಮುಖಿಯಲ್ಲಿ ಉಭಯ ತಂಡಗಳು ಸಮಬಲದ ಹೋರಾಟ ನೀಡಿದರೂ ಪ್ರಸ್ತುತ ಫಾರ್ಮ್​ ಗಮನಿಸಿದರೆ, ಲಕ್ನೋ ವಿರುದ್ಧ ಸಿಎಸ್​ಕೆ ಮೇಲುಗೈ ಸಾಧಿಸುವ ಸಾಧ್ಯತೆಗಳು ಹೆಚ್ಚಿವೆ. ಆದಾಗ್ಯೂ ಪಂದ್ಯದ ದಿನದಂದು ಯಾವ ತಂಡ ಉತ್ತಮ ಪ್ರದರ್ಶನ ನೀಡುತ್ತದೋ ಆ ತಂಡಕ್ಕೆ ಗೆಲುವು ಧಕ್ಕಲಿದೆ.

IPL 2026: ಐಪಿಎಲ್ ಮಧ್ಯದಲ್ಲಿ ಮುಂಬೈ ಆಲ್‌ರೌಂಡರ್​ನ ಟ್ರಯಲ್​ಗೆ ಕರೆದ ಸಿಎಸ್​ಕೆ

ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11

ಸಿಎಸ್​ಕೆ ಸಂಭಾವ್ಯ ಪ್ಲೇಯಿಂಗ್ 11: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ (ನಾಯಕ), ಉರ್ವಿಲ್ ಪಟೇಲ್, ಕಾರ್ತಿಕ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಶಿವಂ ದುಬೆ, ಜೇಮಿ ಓವರ್ಟನ್, ಅಕೇಲ್ ಹೊಸೈನ್, ನೂರ್ ಅಹ್ಮದ್, ಅನ್ಶುಲ್ ಕಾಂಬೋಜ್, ಮುಖೇಶ್ ಚೌಧರಿ. ಇಂಪ್ಯಾಕ್ಟ್ ಪ್ಲೇಯರ್: ಗುರ್ಜ್‌ಪನೀತ್ ಸಿಂಗ್.

ಲಕ್ನೋ ಸಂಭಾವ್ಯ ಪ್ಲೇಯಿಂಗ್ XI: ಮಿಚೆಲ್ ಮಾರ್ಷ್, ಐಡೆನ್ ಮರ್ಕ್ರಾಮ್, ನಿಕೋಲಸ್ ಪೂರನ್, ರಿಷಭ್ ಪಂತ್ (ನಾಯಕ), ಅಕ್ಷತ್ ರಘುವಂಶಿ, ಹಿಮ್ಮತ್ ಸಿಂಗ್, ಶಹಬಾಜ್ ಅಹ್ಮದ್, ದಿಗ್ವೇಶ್ ರಾಠಿ, ಮೊಹಮ್ಮದ್ ಶಮಿ, ಪ್ರಿನ್ಸ್ ಯಾದವ್, ಮಯಾಂಕ್ ಯಾದವ್. ಇಂಪ್ಯಾಕ್ಟ್ ಪ್ಲೇಯರ್: ಅರ್ಶಿನ್ ಕುಲಕರ್ಣಿ/ಜೋಶ್ ಇಂಗ್ಲಿಸ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *