ಐಪಿಎಲ್ 2026 ರ 19 ನೇ ಸೀಸನ್ ಮೇ 2 ರ ಶನಿವಾರದಂದು ಎರಡು ಯಶಸ್ವಿ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಮೊದಲ ಮುಖಾಮುಖಿಯಲ್ಲಿ ಮುಂಬೈ ವಿರುದ್ಧ ಸಿಎಸ್ಕೆ ಭರ್ಜರಿ ಜಯ ಸಾಧಿಸಿತ್ತು. ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದರೆ, ರುತುರಾಜ್ ಗಾಯಕ್ವಾಡ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿದ್ದಾರೆ.