CSK vs RR: 15 ವರ್ಷದ ವೈಭವ್ ಸೂರ್ಯವಂಶಿ ಸುನಾಮಿಗೆ ಕೊಚ್ಚಿ ಹೋದ ಸಿಎಸ್​ಕೆ

CSK vs RR: 15 ವರ್ಷದ ವೈಭವ್ ಸೂರ್ಯವಂಶಿ ಸುನಾಮಿಗೆ ಕೊಚ್ಚಿ ಹೋದ ಸಿಎಸ್​ಕೆ

ಗುವಾಹಟಿಯಲ್ಲಿ ನಡೆದ ಐಪಿಎಲ್ 2026 ರ 3ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 8 ವಿಕೆಟ್​ಗಳಿಂದ ಸೋಲಿಸಿದ ರಾಜಸ್ಥಾನ್ ರಾಯಲ್ಸ್ ಈ ಆವೃತ್ತಿಯನ್ನು ಗೆಲುವಿನೊಂದಿಗೆ ಆರಂಭಿಸಿದೆ. ಈ ಮೂಲಕ ಸಿಎಸ್​ಕೆ ವಿರುದ್ಧ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಕಳೆದ ಆವೃತ್ತಿಯಲ್ಲಿ ಸಿಎಸ್​ಕೆ ವಿರುದ್ಧ ಆಡಿದ್ದ ಎರಡೂ ಪಂದ್ಯಗಳನ್ನು ಗೆದ್ದಿದ್ದ ರಾಜಸ್ಥಾನ್, ಈ ಆವೃತ್ತಿಯಲ್ಲೂ ತನ್ನ ಗೆಲುವಿನ ಓಟವನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ ಕೇವಲ 127 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್, 15 ವರ್ಷದ ವೈಭವ್ ಸೂರ್ಯವಂಶಿಯ ಸಿಡಿಲಬ್ಬರದ ಅರ್ಧಶತಕದಿಂದಾಗಿ ಇನ್ನು 47 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಮುಟ್ಟಿತು.

Source link

Leave a Reply

Your email address will not be published. Required fields are marked *