Daily Devotional: ಮನೆಯಲ್ಲಿ ಸೂರ್ಯ ರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?

Daily Devotional: ಮನೆಯಲ್ಲಿ ಸೂರ್ಯ ರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?

ಬೆಂಗಳೂರು, ಮಾರ್ಚ್​​ 1 2​​: ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸೂರ್ಯನ ರಶ್ಮಿಯು ಮನೆ, ಕಚೇರಿ ಅಥವಾ ದೇವಾಲಯಗಳಂತಹ ಯಾವುದೇ ಸ್ಥಳಕ್ಕೆ ಪ್ರವೇಶಿಸುವುದು ಅತ್ಯಂತ ಮಹತ್ವದ್ದಾಗಿದೆ. ವಾಸ್ತು ಪ್ರಕಾರ, ಸೂರ್ಯನ ಬೆಳಕು ಮನೆಯಲ್ಲಿ ಹರಿಯುವುದರಿಂದ ಅನೇಕ ಸಕಾರಾತ್ಮಕ ಪರಿಣಾಮಗಳುಂಟಾಗುತ್ತವೆ. ಪೂರ್ವ ದಿಕ್ಕಿನಿಂದ ಸೂರ್ಯರಶ್ಮಿ ಪ್ರವೇಶಿಸುವುದು ಮನೆಗೆ ಶುಭ, ಮಾನಸಿಕ ನೆಮ್ಮದಿ, ಉತ್ತಮ ಆರೋಗ್ಯ, ಕೆಲಸ ಕಾರ್ಯಗಳಲ್ಲಿ ಯಶಸ್ಸು ಮತ್ತು ಆದಾಯದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ವಿಶೇಷವಾಗಿ ಪೂರ್ವ ಮತ್ತು ಈಶಾನ್ಯ ದಿಕ್ಕುಗಳಿಂದ ಬರುವ ಬೆಳಕು ಅತ್ಯಂತ ಶುಭವೆಂದು ಪರಿಗಣಿಸಲಾಗುತ್ತದೆ. ಪಶ್ಚಿಮ ದಿಕ್ಕಿನಿಂದ ಸೂರ್ಯಾಸ್ತದ ಸಮಯದಲ್ಲಿ ಬರುವ ಬೆಳಕು ಸಹ ಶುಭಕಾರಿಯಾಗಿದೆ. ಸೂರ್ಯನನ್ನು “ಆತ್ಮಕಾರಕ” ಮತ್ತು “ಆರೋಗ್ಯಂ ಭಾಸ್ಕರಾದಿಚ್ಛೇತ್” ಎಂಬಂತೆ ಆರೋಗ್ಯದಾತ ಎಂದು ಕರೆಯಲಾಗುತ್ತದೆ. ಮನೆಯಲ್ಲಿ ಸೂರ್ಯನ ಕಿರಣಗಳು ಬೀಳುವುದರಿಂದ ಆ ಮನೆಯ ವಾಸ್ತು ಬಲಗೊಂಡು, ಶುಭ ಫಲಗಳನ್ನು ನೀಡುತ್ತದೆ ಎಂದು ಡಾ.ಬಸವರಾಜ ಗುರೂಜಿ ಹೇಳಿದ್ದಾರೆ.

 

 

 

Source link

Leave a Reply

Your email address will not be published. Required fields are marked *