Headlines

Darshan Thoogudeepa bail : ದರ್ಶನ್​​ಗೆ ಕನಿಷ್ಟ ಒಂದು ವರ್ಷ ಜೈಲು ಖಾಯಂ – Kannada News | Darshan Thoogudeepa’s bail application rejected by Supreme Court

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರು ಸುಪ್ರೀಂಕೋರ್ಟ್​​ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಸಾಕ್ಷ್ಯಗಳ ವಿಚಾರಣೆಯಲ್ಲಿ ವಿಳಂಬ, ಜೈಲಿನಲ್ಲಿ ಸೌಲಭ್ಯಗಳ ಕೊರತೆ, ಕುಟುಂಬವನ್ನು ಭೇಟಿ ಮಾಡಲು ಜೈಲಧಿಕಾರಿಗಳಿಂದ ಅವಕಾಶ ನಿರಾಕರಣೆ, ಆರೋಗ್ಯ ಸಮಸ್ಯೆ, ಸಹ ಕೈದಿಗಳಿಂದ ಕಿರುಕುಳ, ಬೆದರಿಕೆ, ಇನ್ನೂ ಕ್ವಾರಂಟೈನ್ ಸೆಲ್​​ನಲಿ ಇಟ್ಟಿರುವುದು ಹೀಗೆ ಹಲವು ಕಾರಣಗಳನ್ನು ನೀಡಿ ದರ್ಶನ್ ಅವರು ಜಾಮೀನಿಗಾಗಿ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ದರ್ಶನ್ ಪರ ವಕೀಲರು ಹಾಗೂ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಾದ ಆಲಿಸಿದ ಸುಪ್ರೀಂ ಕೋರ್ಟ್ ದರ್ಶನ್​​ರ ಜಾಮೀನು ಅರ್ಜಿಯನ್ನು ಪುರಸ್ಕರಿಸಿಲ್ಲ. ಬದಲಿಗೆ ಒಂದು ವರ್ಷದ ಕಾಲಾವಕಾಶವನ್ನು ನೀಡಿದೆ.

ಜಾಮೀನು ಅರ್ಜಿಯ ವಿಚಾರಣೆ ಆಲಿಸಿದ ಸುಪ್ರೀಂಕೋರ್ಟ್, ಪ್ರಕರಣದ ವಿಚಾರಣೆಗೆ ಒಂದು ವರ್ಷದ ಕಾಲಾವಧಿ ನೀಡಿದ್ದು, ಅಷ್ಟರಲ್ಲಿ ಸಾಕ್ಷ್ಯಗಳ ವಿಚಾರಣೆ ಮುಗಿಯದಿದ್ದಲ್ಲಿ, ಜಾಮೀನು ಅರ್ಜಿಯನ್ನು ಪರಿಗಣಿಸುವುದಾಗಿ ಹೇಳಿದೆ. ಅಲ್ಲಿಗೆ, ದರ್ಶನ್​​ಗೆ ಕನಿಷ್ಟ ಒಂದು ವರ್ಷ ಜೈಲು ವಾಸ ಖಾಯಂ ಆದಂತಾಗಿದೆ. ಒಂದು ವರ್ಷದ ಬಳಿಕವಷ್ಟೆ ಅವರು ಜಾಮೀನಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ:ರೇಣುಕಾ ಸ್ವಾಮಿ ಪ್ರಕರಣ: ಸುಳ್ಳು ಸಾಕ್ಷ್ಯ ಆರೋಪಕ್ಕೆ ಎಸ್​​ಪಿಪಿ ಪ್ರಸನ್ನ ತಿರುಗೇಟು

ಸುಪ್ರೀಂ ಕೋರ್ಟ್​​ನಲ್ಲಿ ಇಂದು ನಟ ದರ್ಶನ್ ಪರ ವಾದ ಮಂಡಿಸಿದ ಖ್ಯಾತ ವಕೀಲ ಮುಕುಲ್ ರೊಹ್ಟಗಿ, ‘272ಕ್ಕೂ ಹೆಚ್ಚು ಸಾಕ್ಷಿಗಳು ಪ್ರಕರಣದಲ್ಲಿದ್ದು, ಈ ವರೆಗೆ 10 ಸಾಕ್ಷ್ಯಗಳನ್ನು ಮಾತ್ರವೇ ವಿಚಾರಣೆ ಮಾಡಲಾಗಿದೆ. ಮುಖ್ಯ ಸಾಕ್ಷಿಗಳ ವಿಚಾರಣೆಯನ್ನಾದರೂ ಮುಗಿಸುವಂತೆ ನಾವು ಕೇಳಿದ್ದೆವು ಆದರೆ ಅದು ಸಹ ಸಾಧ್ಯವಾಗಿಲ್ಲ’ ಎಂದರು. ಆದರೆ ರೊಹ್ಟಗಿ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿದ್ಧಾರ್ಥ್ ಲೂತ್ರಾ, ‘ನೀವು (ಆರೋಪಿಗಳು) ಸಾಕ್ಷ್ಯಗಳಿಗೆ ಏನೇನು ಮಾಡಿದ್ದೀರೆಂದು ಹೇಳಿದರೆ ನಿಮ್ಮ ಜಾಮೀನು ಅರ್ಜಿಯೇ ರದ್ದಾಗಲಿದೆ’ ಎಂದರು. ಬಳಿಕ ನ್ಯಾಯಾಲಯಕ್ಕೆ ಮಾಹಿತಿ ನೀಡಿದ ವಕೀಲರು, ‘ಮುಂದಿನ ಒಂದು ವರ್ಷದಲ್ಲಿ ಸಾಕ್ಷ್ಯಗಳ ವಿಚಾರಣೆ ಮುಗಿಸುವುದಾಗಿ ಮಾಹಿತಿ ನೀಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 11:26 am, Fri, 15 May 26

Source link

Leave a Reply

Your email address will not be published. Required fields are marked *