
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಐಪಿಎಲ್ 2026 ರ 14ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 211 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡದ ಪರ ಕನ್ನಡಿಗ ಕೆಎಲ್ ರಾಹುಲ್ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದರು.
ಈ ಸೀಸನ್ನಲ್ಲಿ ಇದು ರಾಹುಲ್ ಅವರ ಮೊದಲ ಅರ್ಧಶತಕವಾಗಿದೆ. ಮೊದಲೆರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ರಾಹುಲ್, ಲೀಗ್ನ ಮೂರನೇ ಪಂದ್ಯದಲ್ಲಿ ಲಯ ಕಂಡುಕೊಂಡು ಕೇವಲ 29 ಎಸೆತಗಳಲ್ಲಿ ತಮ್ಮ ಅರ್ಧಶತಕವನ್ನು ಪೂರೈಸಿದರು. ಇದು ರಾಹುಲ್ ಅವರ ಐಪಿಎಲ್ ವೃತ್ತಿಜೀವನದ 41ನೇ ಅರ್ಧಶತಕವಾಗಿದೆ. ರಾಹುಲ್ ಅವರ ಈ ಅರ್ಧಶತಕದಿಂದಾಗಿ ಡೆಲ್ಲಿ ತಂಡ ಸತತ ಮೂರನೇ ಗೆಲುವಿನತ್ತ ಸಾಗುತ್ತಿದೆ.