2026 ರ ಐಪಿಎಲ್ ಟೂರ್ನಿಯ 51 ನೇ ಪಂದ್ಯ ದೆಹಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯುತ್ತಿದೆ. ವಾಸ್ತವವಾಗಿ, ಈ ಪಂದ್ಯ ಎರಡೂ ತಂಡಗಳಿಗೆ ಮಾಡು ಇಲ್ಲವೇ ಮಡಿ ಪರಿಸ್ಥಿತಿಯಾಗಿದೆ. ಪ್ಲೇಆಫ್ ರೇಸ್‌ನಲ್ಲಿ ಉಳಿಯಲು ಎರಡೂ ತಂಡಗಳು ಯಾವುದೇ ಬೆಲೆ ತೆತ್ತಾದರೂ ಈ ಪಂದ್ಯವನ್ನು ಗೆಲ್ಲಲೇಬೇಕು. ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದರೆ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಎಂಟನೇ ಸ್ಥಾನದಲ್ಲಿದೆ.
