Headlines

DC vs PBKS: 12 ರನ್​ಗೆ ಕ್ಯಾಚ್ ಡ್ರಾಪ್; ಭರ್ಜರಿ ಶತಕ ಚಚ್ಚಿದ ರಾಹುಲ್ – Kannada News | IPL 2026: KL Rahul hits 6th IPL ton for Delhi Capitals against Punjab Kings

ಐಪಿಎಲ್ 2026 ರಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಕನ್ನಡಿಗ ಕೆಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿದರು. ಬ್ಯಾಟಿಂಗ್‌ ಸ್ನೇಹಿ ಪಿಚ್​ನಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಹರಿಸಿದ ರಾಹುಲ್ ಕೇವಲ 48 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದರು. ಯಾನ್ಸನ್ ಎಸೆದ 15ನೇ ಓವರ್​ನ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ರಾಹುಲ್ ತಮ್ಮ ಐಪಿಎಲ್ ವೃತ್ತಿಜೀವನದ 6ನೇ ಶತಕ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪರ ಎರಡನೇ ಶತಕವನ್ನು ದಾಖಲಿಸಿದರು.

Source link

Leave a Reply

Your email address will not be published. Required fields are marked *