ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ರ 39ನೇ ಪಂದ್ಯ ದೆಹಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ಇದು ಈ ಆವೃತ್ತಿಯಲ್ಲಿ ಎರಡು ತಂಡಗಳ ಎರಡನೇ ಮುಖಾಮುಖಿ ಇದಾಗಿತ್ತು. ಮೊದಲ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಆರ್ಸಿಬಿ ವಿರುದ್ಧ ಗೆಲುವು ಸಾಧಿಸಿತ್ತು. ಹೀಗಾಗಿ ಈ ಪಂದ್ಯ ಆರ್ಸಿಬಿ ಪಾಲಿಗೆ ಸೇಡಿನ ಸಮರವಾಗಿತ್ತು. ಈ ಸೇಡಿನ ಸಮರದಲ್ಲಿ ಡೆಲ್ಲಿ ತಂಡವನ್ನು ಅವರ ನೆಲದಲ್ಲಿ ಹೀನಾಯವಾಗಿ ಮಣಿಸಿದ ಆರ್ಸಿಬಿ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಜೊತೆಗೆ ಲೀಗ್ನಲ್ಲಿ ತನ್ನ 6ನೇ ಗೆಲುವನ್ನು ದಾಖಲಿಸಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡ ಕೇವಲ 75 ರನ್ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಆರ್ಸಿಬಿ ಕೇವಲ 1 ವಿಕೆಟ್ ಕಳೆದುಕೊಂಡು ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿತು.
Published On – 9:58 pm, Mon, 27 April 26