DC vs RCB: ರಾಹುಲ್ ವಿರುದ್ಧ ಸೇಡು ತೀರಿಸಿಕೊಂಡ ಹೇಜಲ್‌ವುಡ್; ವಿಡಿಯೋ – Kannada News | IPL 2026: DC vs RCB Match 39 Delhi’s Dramatic Collapse, Hazlewood Dominates

ಐಪಿಎಲ್ 2026 ರ 39ನೇ ಪಂದ್ಯ ದೆಹಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ತಂಡ ಮೊದಲ 3 ಓವರ್​ಗಳಲ್ಲೇ ಪ್ರಮುಖ 5 ವಿಕೆಟ್​ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಭುವನೇಶ್ವರ್ ಕುಮಾರ್ ಹಾಗೂ ಹೇಜಲ್‌ವುಡ್ ಅವರ ದಾಳಿಗೆ ತತ್ತರಿಸಿ ಹೋಗಿರುವ ಡೆಲ್ಲಿ ಬ್ಯಾಟರ್​ಗಳಿಗೆ ಖಾತೆ ತೆರೆಯಲು ಸಾಧ್ಯವಾಗುತ್ತಿಲ್ಲ.

ಅದರಲ್ಲೂ ಇದೇ ಉಭಯ ತಂಡಗಳ ನಡುವೆ ಏಪ್ರಿಲ್ 18 ರಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ದೆಹಲಿ 6 ವಿಕೆಟ್‌ಗಳಿಂದ ಆರ್​​ಸಿಬಿಯನ್ನು ಸೋಲಿಸಿತ್ತು. ಆ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್, ಆರ್​ಸಿಬಿ ವಿರುದ್ಧ ಗೆಲುವಿನ ಅರ್ಧಶತಕ ಬಾರಿಸಿದ್ದರು. ಅಲ್ಲದೆ ಆ ಪಂದ್ಯದಲ್ಲಿ ಅವರು ಹೇಜಲ್‌ವುಡ್ ವಿರುದ್ಧ ಸರಾಗವಾಗಿ ರನ್ ಕಲೆಹಾಕಿದ್ದರು. ತವರು ಮೈದಾನದ ಲಾಭ ಪಡೆದುಕೊಂಡಿದ್ದ ರಾಹುಲ್ ಹೇಜಲ್‌ವುಡ್ ಬೌಲಿಂಗ್​ನಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದಿದ್ದರು.

ಹೀಗಾಗಿ ಇಂದಿನ ಪಂದ್ಯದಲ್ಲಿ ರಾಹುಲ್ ಮೇಲೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದ್ದರು. ಅದರಂತೆ ಆರ್​​ಸಿಬಿ ಪರ ಎರಡನೇ ಓವರ್ ಬೌಲಿಂಗ್ ಮಾಡಿದ ಹೇಜಲ್‌ವುಡ್, ಎಸೆದ ಮೊದಲ ಎಸೆತದಲ್ಲೇ ರಾಹುಲ್ ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾದರು. ಹೇಜಲ್‌ವುಡ್ ಎಸೆದ ಶಾರ್ಟ್​ ಬಾಲ್ ಅನ್ನು ಸಿಕ್ಸರ್​ಗಟ್ಟುವ ಯತ್ನದಲ್ಲಿ ರಾಹುಲ್ ವಿಕೆಟ್​ ಕೀಪರ್​ಗೆ ಕ್ಯಾಚ್ ನೀಡಿದರು. ಕಳೆದ ಮುಖಾಮುಖಿಯಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ್ದ ರಾಹುಲ್​, ಈ ಪಂದ್ಯದಲ್ಲಿ ಕೇವಲ 1 ರನ್ ಬಾರಿಸಲಷ್ಟೇ ಶಕ್ತರಾದರು.

ಇನ್ನು ಇದೇ ಓವರ್​ನಲ್ಲಿಯೇ ಹೇಜಲ್​ವುಡ್ ಮತ್ತೊಂದು ವಿಕೆಟ್ ಉರುಳಿಸಿದರು. ರಾಹುಲ್ ವಿಕೆಟ್ ಪತನದ ಬಳಿಕ ಬಂದ ಸಮೀರ್ ರಿಜ್ವಿ ಕೂಡ ಎದುರಿಸಿದ ಮೊದಲ ಎಸೆತದಲ್ಲೇ ವಿಕೆಟ್ ಕೀಪರ್​ಗೆ ಕ್ಯಾಚಿತ್ತು ಖಾತೆ ತೆರೆಯದೆ ನಿರ್ಗಮಿಸಿದರು.

Source link

Leave a Reply

Your email address will not be published. Required fields are marked *