DK Shivakumar Oath Taking Ceremony Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

DK Shivakumar Oath Taking Ceremony Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಬೆಂಗಳೂರು, ಜೂನ್​ 03: ರಾಜ್ಯದ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್​​ ಪಟ್ಟಾಭಿಷೇಕ ನಡೆಯುತ್ತಿದೆ. ಇದಕ್ಕಾಗಿ ಲೋಕಭವನದ ಗಾಜಿನ ಮನೆ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್​ ಕಟೌಟ್​​, ಬ್ಯಾನರ್​ಗಳು ರಾರಾಜಿಸುತ್ತಿವೆ. ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಕೂಡ ಆಗಮಿಸಿದ್ದಾರೆ. ವಿಶೇಷ ಅಂದರೆ ಬಂಡೆ ಪ್ರಮಾಣ ವಚನಕ್ಕೆ ವಾಸ್ತು ಟಚ್​ ಕೊಡಲಾಗಿದ್ದು, ಸರ್ವಧರ್ಮದ ಗುರುಗಳಿಗೂ ಭಾಗಿಯಾಗಿದ್ದಾರೆ. ಸಂಜೆ 4 ಗಂಟೆ 5 ನಿಮಿಷದ ಶುಭ ಮುಹೂರ್ತದಲ್ಲಿ ಡಿಕೆ ಶಿವಕುಮಾರ್​ ಪಟ್ಟಾಭಿಷೇಕ ನಡೆಯುತ್ತಿದೆ. ಈ ಹಿಂದೆ ಲೋಕಭವನದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಗಳ ವೇದಿಕೆ ಪಶ್ಚಿಮಾಭಿಮುಖವಾಗಿ ಇರುತ್ತಿತ್ತು. ಆದರೆ ಈ ಬಾರಿ ಜ್ಯೋತಿಷಿ ಆರಾಧ್ಯ ಸಲಹೆಯಂತೆ, ವೇದಿಕೆಯನ್ನ ಪೂರ್ವಾಭಿಮುಖವಾಗಿ ಸಿದ್ಧಪಡಿಸಲಾಗಿದೆ. ಡಿಕೆ ಶಿವಕುಮಾರ್​ ಸಹೋದರ ಡಿಕೆ ಸುರೇಶ್, ಇಡೀ ಕಾರ್ಯಕ್ರಮದ ಸಂಪೂರ್ಣ ಹೊಣೆ ಹೊತ್ತುಕೊಂಡಿದ್ದಾರೆ. ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣದ ನೇರಪ್ರಸಾರ ಲೈವ್​ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *