ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡವು 2026 ರ ಟಿ20 ವಿಶ್ವಕಪ್‌ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರಿಸುವಲ್ಲಿ ಯಶಸ್ವಿಯಾಗಿದೆ. ಟೂರ್ನಿಯ 15 ನೇ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ ಶೆರ್ಫೇನ್ ರುದರ್ಫೋರ್ಡ್ ಅವರ ಸ್ಫೋಟಕ ಇನ್ನಿಂಗ್ಸ್ ಬಲದಿಂದ ಇಂಗ್ಲೆಂಡ್‌ಗೆ 197 ರನ್‌ಗಳ ಗುರಿಯನ್ನು ನೀಡಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್, ವಿಂಡೀಸ್ ಸ್ಪಿನ್ನರ್‌ಗಳ ಬಲೆಗೆ ಸಿಲುಕಿ ಪೂರ್ಣ 20 ಓವರ್ಗಳನ್ನು ಆಡಲಾಗದೆ ಆಲೌಟ್ ಆಯಿತು. ಅಂತಿಮವಾಗಿ ಇಂಗ್ಲೆಂಡ್‌ನ ಇನ್ನಿಂಗ್ಸ್ 19 ಓವರ್‌ಗಳಲ್ಲಿ 166 ರನ್‌ಗಳಿಗೆ ಕೊನೆಗೊಂಡಿತು. ಇದರೊಂದಿಗೆ ವೆಸ್ಟ್ ಇಂಡೀಸ್ 10 ವರ್ಷಗಳ ನಂತರ ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ಸಾಧನೆ ಮಾಡಿತು.
