ಖ್ಯಾತ ಶಿಕ್ಷಣ ತಜ್ಞರಾದ ಡಾ.ಗುರುರಾಜ ಕರ್ಜಗಿಯವರು ಟಿವಿ9ನ ವಿಶೇಷ ಪಾಡ್‌ಕಾಸ್ಟ್‌ನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಲ್ಲಿ ಸಮಯ ನಿರ್ವಹಣೆ ಮತ್ತು ಗೊಂದಲ ನಿವಾರಣೆ ಕುರಿತು ಸಲಹೆ ನೀಡಿದ್ದಾರೆ. ವಿದ್ಯಾರ್ಥಿಗಳು ಅನೇಕ ವಿಷಯಗಳನ್ನು ಕಲಿಯಲು ಪ್ರಯತ್ನಿಸಿ ಗೊಂದಲಕ್ಕೊಳಗಾಗುವುದನ್ನು ತಪ್ಪಿಸಲು, ಒಂದೇ ವಿಷಯದ ಮೇಲೆ ಆಳವಾಗಿ ಗಮನ ಹರಿಸುವಂತೆ ಅವರು ಸೂಚಿಸಿದ್ದಾರೆ.
ಪರೀಕ್ಷಾ ಸಮಯದಲ್ಲಿ ಉತ್ತರಗಳನ್ನು ಬರೆಯುವಾಗ ಸಮಯದ ಕೊರತೆ ಎದುರಾಗುವುದನ್ನು ತಪ್ಪಿಸಲು, ಅಂಕಗಳಿಗೆ ಅನುಗುಣವಾಗಿ ಉತ್ತರಗಳ ಉದ್ದವನ್ನು ನಿರ್ಧರಿಸಲು ಸಲಹೆ ನೀಡಲಾಗಿದೆ. ಹೆಚ್ಚಿನ ಉತ್ತರ ಬರೆಯುವುದರಿಂದ ಸಮಯ ವ್ಯರ್ಥವಾಗುತ್ತದೆ ಮತ್ತು ಇತರ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗುವುದಿಲ್ಲ. ಜೊತೆಗೆ, ನಿಯಮಿತವಾಗಿ ಬರವಣಿಗೆ ಅಭ್ಯಾಸ ಮಾಡುವುದು ಅಕ್ಷರ ದೊಂಡುಗವನ್ನು ಸುಧಾರಿಸುತ್ತದೆ ಮತ್ತು ಬರವಣಿಗೆ ವೇಗವನ್ನು ಹೆಚ್ಚಿಸುತ್ತದೆ ಎಂದು ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದಾರೆ.
ಇದನ್ನೂ ಓದಿ: ಬಡ ಮಕ್ಕಳಿಗೆ ವಿದ್ಯಾ ದೇವತೆಯಾದ ಭಾರತೀಯ ಶಿಕ್ಷಕಿಗೆ ವಿಶ್ವ ಮನ್ನಣೆ: ‘ಜಾಗತಿಕ ಶಿಕ್ಷಕ ಪ್ರಶಸ್ತಿ’ ಪಡೆದ ರೂಬಲ್ ನಾಗಿ
ಶಿಕ್ಷಣಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
