ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆ ವತಿಯಿಂದ ಸಾರ್ವಜನಿಕ ಸಂಪರ್ಕಾಧಿಕಾರಿ (PRO) ಹುದ್ದೆಗೆ ನೇಮಕಾತಿ ಸಂಬಂಧಿಸಿದ ಮಹತ್ವದ ಅಧಿಸೂಚನೆ ಪ್ರಕಟವಾಗಿದೆ. ಅರಣ್ಯ ಭವನ, ಮಲ್ಲೇಶ್ವರಂ, ಬೆಂಗಳೂರು ಕೇಂದ್ರ ಕಚೇರಿಯಿಂದ ಈ ಪ್ರಕಟಣೆ ಹೊರಡಿಸಲಾಗಿದ್ದು, ಕರ್ನಾಟಕ ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನ (KFWCCF) ಅಡಿಯಲ್ಲಿ ಒಪ್ಪಂದ ಆಧಾರಿತವಾಗಿ ಎರಡು ವರ್ಷಗಳ ಪ್ರಾಥಮಿಕ ಅವಧಿಗೆ ಈ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ.
ಸಾರ್ವಜನಿಕ ಸಂಪರ್ಕ ಕ್ಷೇತ್ರದಲ್ಲಿ ಅನುಭವ ಹಾಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಹ ಮತ್ತು ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್ http://kfwccf.in ಮೂಲಕ ಡೌನ್‌ಲೋಡ್ ಮಾಡಿ ಭರ್ತಿ ಸಲ್ಲಿಸಬಹುದು.
ಅರ್ಜಿಯನ್ನು ಫೆಬ್ರವರಿ 25ರೊಳಗೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ನೇಮಕಾತಿ ಪ್ರಕ್ರಿಯೆ, ಅರ್ಜಿ ವಿಧಾನ ಹಾಗೂ ಸೇವಾ ನಿಯಮಗಳ ಕುರಿತ ಹೆಚ್ಚಿನ ವಿವರಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅರಣ್ಯ ಮತ್ತು ಪರಿಸರ ಸಂರಕ್ಷಣಾ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವವರಿಗೆ ಇದು ಮಹತ್ವದ ವೃತ್ತಿ ಅವಕಾಶವಾಗಿದೆ.
ಅರ್ಜಿ ನಮೂನೆ ಹಾಗೂ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: Notification for the post of Public Relations Officer (PRO) to KFWCCF
ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ