Gold Rate: ಹತ್ತು ಗ್ರಾಮ್ ಚಿನ್ನದ ಬೆಲೆ 2,650 ರೂ ಇಳಿಕೆ; ಬೆಳ್ಳಿಯೂ ಕುಸಿತ – Kannada News | Gold Price Today on 30th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 30: ಚಿನ್ನದ ಬೆಲೆ ಸತತ ಎರಡನೇ ದಿನ ಇಳಿದಿದೆ. ನಿನ್ನೆ 85 ರೂ ಇಳಿದಿದ್ದ ಬಂಗಾರದ ದರ (Gold Rates) ಇವತ್ತು ಮಂಗಳವಾರ ಬರೋಬ್ಬರಿ 265 ರೂಗಳಷ್ಟು ತಗ್ಗಿದೆ. ಈ ಮೂಲಕ ಆಭರಣ ಚಿನ್ನದ ಬೆಲೆ ಮತ್ತೊಮ್ಮೆ 13,000 ರೂ ಗಡಿಯೊಳಗೆ ಬಂದಿದೆ. ಅಪರಂಜಿ ಚಿನ್ನದ ಬೆಲೆ 14,000 ರೂ ಮಟ್ಟಕ್ಕಿಂತ ಕೆಳಗಿಳಿಯುವ ಸನ್ನಾಹದಲ್ಲಿದೆ. ವಿದೇಶಗಳಲ್ಲೂ ಹಲವೆಡೆ ಇದರ ಬೆಲೆ ಕಡಿಮೆ ಆಗಿದೆ. ಇನ್ನು, ಬೆಳ್ಳಿ ಬೆಲೆ ಐದು ರೂ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,28,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,40,130 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,28,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 23,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 24,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜೂನ್ 30ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,013 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,845 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,510 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,013 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,845 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,845 ರೂ
  • ಚೆನ್ನೈ: 13,300 ರೂ
  • ಮುಂಬೈ: 12,845 ರೂ
  • ದೆಹಲಿ: 12,860 ರೂ
  • ಕೋಲ್ಕತಾ: 12,845 ರೂ
  • ಕೇರಳ: 12,845 ರೂ
  • ಅಹ್ಮದಾಬಾದ್: 12,850 ರೂ
  • ಜೈಪುರ್: 12,860 ರೂ
  • ಲಕ್ನೋ: 12,860 ರೂ
  • ಭುವನೇಶ್ವರ್: 12,845 ರೂ

ಇದನ್ನೂ ಓದಿ: ಐಟಿಆರ್ ಸಲ್ಲಿಕೆಯಿಂದ ಟಿಡಿಎಸ್ ಪಾವತಿವರೆಗೆ, ಜುಲೈನಲ್ಲಿ ಡೆಡ್​ಲೈನ್​ಗಳಿವೆ, ಗಮನಿಸಿ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 531 ರಿಂಗಿಟ್ (12,348 ರುಪಾಯಿ)
  • ದುಬೈ: 485.75 ಡಿರಾಮ್ (12,590 ರುಪಾಯಿ)
  • ಅಮೆರಿಕ: 132.50 ಡಾಲರ್ (12,542 ರುಪಾಯಿ)
  • ಸಿಂಗಾಪುರ: 180 ಸಿಂಗಾಪುರ್ ಡಾಲರ್ (13,162 ರುಪಾಯಿ)
  • ಕತಾರ್: 486.50 ಕತಾರಿ ರಿಯಾಲ್ (12,365 ರೂ)
  • ಸೌದಿ ಅರೇಬಿಯಾ: 499 ಸೌದಿ ರಿಯಾಲ್ (12,579 ರುಪಾಯಿ)
  • ಓಮನ್: 51.70 ಒಮಾನಿ ರಿಯಾಲ್ (12,712 ರುಪಾಯಿ)
  • ಕುವೇತ್: 41.14 ಕುವೇತಿ ದಿನಾರ್ (12,649 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 235 ರೂ
  • ಚೆನ್ನೈ: 245 ರೂ
  • ಮುಂಬೈ: 235 ರೂ
  • ದೆಹಲಿ: 235 ರೂ
  • ಕೋಲ್ಕತಾ: 235 ರೂ
  • ಕೇರಳ: 245 ರೂ
  • ಅಹ್ಮದಾಬಾದ್: 235 ರೂ
  • ಜೈಪುರ್: 235 ರೂ
  • ಲಕ್ನೋ: 235 ರೂ
  • ಭುವನೇಶ್ವರ್: 245 ರೂ
  • ಪುಣೆ: 235

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *