Gold Rate: ಹತ್ತು ಗ್ರಾಮ್ ಚಿನ್ನದ ಬೆಲೆ 2,250 ರೂ ಏರಿಕೆ; ಬೆಳ್ಳಿಯೂ ದುಬಾರಿ – Kannada News | Gold Price Today on 3rd July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 3: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತ ಮೂರನೇ ದಿನ ಹೆಚ್ಚಿವೆ. ಇಂದು ಶುಕ್ರವಾರ ಚಿನ್ನದ ಬೆಲೆ (Gold Rate) ಒಂದು ಗ್ರಾಮ್​ಗೆ ಬರೋಬ್ಬರಿ 225 ರೂಗಳಷ್ಟು ದುಬಾರಿಗೊಂಡಿದೆ. 18 ಕ್ಯಾರಟ್ ಚಿನ್ನದ ಬೆಲೆಯೇ 11,000 ರೂ ಗಡಿ ದಾಟಿದೆ. ಶುದ್ಧ ಚಿನ್ನದ (24 ಕ್ಯಾರಟ್) ಬೆಲೆ 14,700 ರೂ ಗಡಿ ಮುಟ್ಟಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಸಖತ್ ಏರಿದೆ. ಬೆಳ್ಳಿ ಬೆಲೆಯೂ ಒಂದು ಗ್ರಾಮ್​ಗೆ 5ರಿಂದ 10 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,34,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,47,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,34,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜುಲೈ 3ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,700 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,475 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,025 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,700 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,475 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,475 ರೂ
  • ಚೆನ್ನೈ: 13,700 ರೂ
  • ಮುಂಬೈ: 13,475 ರೂ
  • ದೆಹಲಿ: 13,490 ರೂ
  • ಕೋಲ್ಕತಾ: 13,475 ರೂ
  • ಕೇರಳ: 13,475 ರೂ
  • ಅಹ್ಮದಾಬಾದ್: 13,480 ರೂ
  • ಜೈಪುರ್: 13,490 ರೂ
  • ಲಕ್ನೋ: 13,490 ರೂ
  • ಭುವನೇಶ್ವರ್: 13,475 ರೂ

ಇದನ್ನೂ ಓದಿ: ಹಳೆಯ ಸ್ಮಾರ್ಟ್​ಫೋನ್​ಗಳನ್ನು ಬಳಸಿ ಡೇಟಾ ಸೆಂಟರ್? ಗೂಗಲ್ ಮತ್ತು ಕ್ಯಾಲಿಫೋರ್ನಿಯಾ ವಿವಿ ಸಂಶೋಧಕರಿಂದ ಹೊಸ ಪ್ರಯೋಗ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 561 ರಿಂಗಿಟ್ (13,129 ರುಪಾಯಿ)
  • ದುಬೈ: 494.75 ಡಿರಾಮ್ (12,827 ರುಪಾಯಿ)
  • ಅಮೆರಿಕ: 136 ಡಾಲರ್ (12,958 ರುಪಾಯಿ)
  • ಸಿಂಗಾಪುರ: 185 ಸಿಂಗಾಪುರ್ ಡಾಲರ್ (13,667 ರುಪಾಯಿ)
  • ಕತಾರ್: 498.50 ಕತಾರಿ ರಿಯಾಲ್ (13,026 ರೂ)
  • ಸೌದಿ ಅರೇಬಿಯಾ: 513 ಸೌದಿ ರಿಯಾಲ್ (13,015 ರುಪಾಯಿ)
  • ಓಮನ್: 52.90 ಒಮಾನಿ ರಿಯಾಲ್ (13,090 ರುಪಾಯಿ)
  • ಕುವೇತ್: 41.40 ಕುವೇತಿ ದಿನಾರ್ (12,806 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 250 ರೂ
  • ಚೆನ್ನೈ: 260 ರೂ
  • ಮುಂಬೈ: 250 ರೂ
  • ದೆಹಲಿ: 250 ರೂ
  • ಕೋಲ್ಕತಾ: 250 ರೂ
  • ಕೇರಳ: 260 ರೂ
  • ಅಹ್ಮದಾಬಾದ್: 250 ರೂ
  • ಜೈಪುರ್: 250 ರೂ
  • ಲಕ್ನೋ: 250 ರೂ
  • ಭುವನೇಶ್ವರ್: 260 ರೂ
  • ಪುಣೆ: 250

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *