ಬೆಂಗಳೂರು, ಮೇ 5: ಚಿನ್ನದ ಬೆಲೆ ಇವತ್ತೂ ಕುಸಿದಿದೆ. ನಿನ್ನೆ ಗ್ರಾಮ್ಗೆ 120 ರೂ ಇಳಿದಿದ್ದ ಬಂಗಾರದ ದರ (Gold Rates) ಇವತ್ತು ಮಂಗಳವಾರ 40 ರೂ ತಗ್ಗಿದೆ. ಅಪರಂಜಿ ಚಿನ್ನದ ಬೆಲೆ ಮತ್ತೊಮ್ಮೆ 15,000 ರೂ ಒಳಗೆ ಇಳಿದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಸ್ವರ್ಣ ಬೆಲೆ ಕಡಿಮೆಗೊಂಡಿದೆ. ಬೆಳ್ಳಿ ಬೆಲೆಯಲ್ಲೂ ಇವತ್ತು ಭರ್ಜರಿ ಇಳಿಕೆ ಆಗಿದೆ. ಗ್ರಾಮ್ಗೆ 10 ರೂನಷ್ಟು ಕಡಿಮೆ ಆಗಿದೆ. ಬೆಂಗಳೂರಿನಲ್ಲಿ ಅದರ ಬೆಲೆ 265 ರೂನಿಂದ 255 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,36,750 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,49,180 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,36,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 25,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 5ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,918 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,675 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,189 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,918 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,675 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 13,675 ರೂ
- ಚೆನ್ನೈ: 13,820 ರೂ
- ಮುಂಬೈ: 13,675 ರೂ
- ದೆಹಲಿ: 13,690 ರೂ
- ಕೋಲ್ಕತಾ: 13,675 ರೂ
- ಕೇರಳ: 13,675 ರೂ
- ಅಹ್ಮದಾಬಾದ್: 13,680 ರೂ
- ಜೈಪುರ್: 13,690 ರೂ
- ಲಕ್ನೋ: 13,690 ರೂ
- ಭುವನೇಶ್ವರ್: 13,675 ರೂ
ಇದನ್ನೂ ಓದಿ: ದೆಹಲಿಯಲ್ಲಿ 9 ಮಂದಿ ಬಲಿತೆಗೆದ ಎಸಿ ಸ್ಫೋಟ; ಏರ್ ಕಂಡೀಷನರ್ ಸ್ಫೋಟಕ್ಕೆ ಕಾರಣವೇನು, ನಿಯಂತ್ರಣ ಹೇಗೆ?
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಮಲೇಷ್ಯಾ: 553 ರಿಂಗಿಟ್ (13,303 ರುಪಾಯಿ)
- ದುಬೈ: 502.25 ಡಿರಾಮ್ (13,041 ರುಪಾಯಿ)
- ಅಮೆರಿಕ: 142.50 ಡಾಲರ್ (13,590 ರುಪಾಯಿ)
- ಸಿಂಗಾಪುರ: 180.80 ಸಿಂಗಾಪುರ್ ಡಾಲರ್ (13,501 ರುಪಾಯಿ)
- ಕತಾರ್: 507.50 ಕತಾರಿ ರಿಯಾಲ್ (13,277 ರೂ)
- ಸೌದಿ ಅರೇಬಿಯಾ: 512 ಸೌದಿ ರಿಯಾಲ್ (13,018 ರುಪಾಯಿ)
- ಓಮನ್: 54.05 ಒಮಾನಿ ರಿಯಾಲ್ (13,387 ರುಪಾಯಿ)
- ಕುವೇತ್: 41.66 ಕುವೇತಿ ದಿನಾರ್ (12,970 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 255 ರೂ
- ಚೆನ್ನೈ: 265 ರೂ
- ಮುಂಬೈ: 255 ರೂ
- ದೆಹಲಿ: 255 ರೂ
- ಕೋಲ್ಕತಾ: 255 ರೂ
- ಕೇರಳ: 265 ರೂ
- ಅಹ್ಮದಾಬಾದ್: 255 ರೂ
- ಜೈಪುರ್: 255 ರೂ
- ಲಕ್ನೋ: 255 ರೂ
- ಭುವನೇಶ್ವರ್: 265 ರೂ
- ಪುಣೆ: 255
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
