ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಈ ಆವೃತ್ತಿಯ ಆರನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸುತ್ತಿದೆ. ಇದು ಗುಜರಾತ್‌ನ ಆರನೇ ಪಂದ್ಯವೂ ಆಗಿದೆ. ಉಭಯ ತಂಡಗಳ ನಡುವಿನ ಪಂದ್ಯವನ್ನು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದೆ. ಗುಜರಾತ್ ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ ಸತತ 3 ಪಂದ್ಯಗಳನ್ನು ಗೆದ್ದಿದೆ. ಇತ್ತ ಮುಂಬೈ 5 ರಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆಲ್ಲಲು ಸಾಧ್ಯವಾಗಿದೆ. ಆದ್ದರಿಂದ, ಈ ಪಂದ್ಯದಲ್ಲಿ ಗುಜರಾತ್ ಅನ್ನು ಸೋಲಿಸಿ ಗೆಲುವಿನ ಹಾದಿಗೆ ಮರಳುವ ಸವಾಲು ಮುಂಬೈ ಮುಂದಿದೆ.