ಐಪಿಎಲ್ 2026 ರ 42ನೇ ಪಂದ್ಯವು ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಿತು. ಲೀಗ್ನಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿತ್ತು. ಮೊದಲ ಮುಖಾಮುಖಿಯಲ್ಲಿ ಆರ್ಸಿಬಿ ಗೆದ್ದಿದ್ದರೆ, ಇದೀಗ ಎರಡನೇ ಪಂದ್ಯವನ್ನು ಗುಜರಾತ್ ಟೈಟಾನ್ಸ್ ಸುಲಭವಾಗಿ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ಕೇವಲ 155 ರನ್ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಗುಜರಾತ್ ಇನ್ನು 25 ಬಾಲ್ಗಳು ಬಾಕಿ ಇರುವಂತೆಯೇ ಜಯ ಸಾಧಿಸಿತು. ಈ ಆವೃತ್ತಿಯಲ್ಲಿ ಇದು ಆರ್ಸಿಬಿಯ ಮೂರನೇ ಸೋಲಾದರೆ, ಇತ್ತ ಗುಜರಾತ್ ತಂಡಕ್ಕೆ 5ನೇ ಗೆಲುವಾಗಿದೆ.
