GT vs RR: ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಯಶಸ್ವಿ ಜೈಸ್ವಾಲ್ ಅವರ ಸಾಮರ್ಥ್ಯ ಇಡೀ ಜಗತ್ತಿಗೆ ತಿಳಿದಿದೆ. ಆದರೆ ಈ ಬಾರಿಯ ಐಪಿಎಲ್‌ನಲ್ಲಿ ಜೈಸ್ವಾಲ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಆದಾಗ್ಯೂ ಗುಜರಾತ್ ಟೈಟಾನ್ಸ್ ವಿರುದ್ಧದ ಕ್ವಾಲಿಫೈಯರ್ 2 ಪಂದ್ಯದಲ್ಲಿ ಜೈಸ್ವಾಲ್ ಅವರಿಂದ ಒಂದೊಳ್ಳೆ ಇನ್ನಿಂಗ್ಸ್​ನ ನಿರೀಕ್ಷೆ ಇತ್ತು. ಆದರೆ ಆ ಪಂದ್ಯದಲ್ಲೂ ನಿರಾಸೆ ಮೂಡಿಸಿದ ಜೈಸ್ವಾಲ್ ಕೇವಲ ಎರಡು ಎಸೆತಗಳನ್ನು ಎದುರಿಸಿ ಒಂದು ರನ್ ಗಳಿಸಿ ಔಟಾದರು. ಮೊಹಮ್ಮದ್ ಸಿರಾಜ್ ಎಸೆದ ಬೌನ್ಸರ್ ಎಸೆತವನ್ನು ಸಿಕ್ಸರ್​ಗಟ್ಟುವ ಯತ್ನದಲ್ಲಿ ಜೈಸ್ವಾಲ್ ಕ್ಯಾಚ್ ನೀಡಿದರು. ಈ ಮೂಲಕ ಪ್ಲೇಆಫ್‌ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಯಶಸ್ವಿ ಜೈಸ್ವಾಲ್ ಅವರ ಕಳಪೆ ಪ್ರದರ್ಶನ ಸತತ ಮೂರನೇ ಪಂದ್ಯದಲ್ಲೂ ಮುಂದುವರೆಯಿತು.

ಐಪಿಎಲ್ ನಾಕೌಟ್ ಪಂದ್ಯಗಳಲ್ಲಿ, ಯಶಸ್ವಿ ಜೈಸ್ವಾಲ್ ಮೂರು ಪಂದ್ಯಗಳಲ್ಲಿ ಕೇವಲ 26 ರನ್ ಗಳಿಸಿದ್ದಾರೆ. 2022 ರಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಕೇವಲ ಮೂರು ರನ್ ಗಳಿಸಿದ್ದ ಜೈಸ್ವಾಲ್, ಆ ಬಳಿಕ ನಡೆದಿದ್ದ ಫೈನಲ್ ಪಂದ್ಯದಲ್ಲಿಯೂ 22 ರನ್ ಬಾರಿಸಿದ್ದರು. ಈಗ ಕೇವಲ ಒಂದು ರನ್ ಗಳಿಸಿ ಔಟಾಗಿದ್ದಾರೆ. ಪ್ಲೇಆಫ್ ಸುತ್ತಿನಲ್ಲಿ ಜೈಸ್ವಾಲ್ ಇದುವರೆಗೆ ಒಂದೇ ಒಂದು ಅರ್ಧಶತಕ ಬಾರಿಸಿಲ್ಲ ಎಂಬುದು ಗಮನಿಸಬೇಕಾದ ಸಂಗತಿಯಾಗಿದೆ.

Source link

Leave a Reply

Your email address will not be published. Required fields are marked *