ಇಂಡಿಯನ್ ಪ್ರೀಮಿಯರ್ ಲೀಗ್ನ 56ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ. ಅಂದರೆ ಪ್ರಸ್ತುತ ಪಾಯಿಂಟ್ಸ್ ಟೇಬಲ್ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು 14 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದರೆ, ಗುಜರಾತ್ ಟೈಟಾನ್ಸ್ ತಂಡವು 14 ಪಾಯಿಂಟ್ಸ್ನೊಂದಿಗೆ ಮೂರನೇ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ 16 ಅಂಕಗಳೊಂದಿಗೆ ಅಗ್ರಸ್ಥಾನ ಸ್ವಾಧೀನಪಡಿಸಿಕೊಳ್ಳಲಿದೆ.
ಗುಜರಾತ್ ಟೈಟಾನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಈವರೆಗೆ 7 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಗುಜರಾತ್ ಟೈಟಾನ್ಸ್ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಸನ್‌ರೈಸರ್ಸ್ ಹೈದರಾಬಾದ್ ತಂಡ ಗೆದ್ದಿರುವುದು ಕೇವಲ ಒಂದು ಬಾರಿ ಮಾತ್ರ. ಇನ್ನು ಒಂದು ಮ್ಯಾಚ್ ಕಾರಣಾಂತರದಿಂದ ರದ್ದಾಗಿತ್ತು.
ಗುಜರಾತ್ ಟೈಟಾನ್ಸ್ ತಂಡ: ಶುಭ್ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಕುಮಾರ್ ಕುಶಾಗ್ರಾ, ಅನುಜ್ ರಾವತ್, ಜೋಸ್ ಬಟ್ಲರ್, ನಿಶಾಂತ್ ಸಿಂಧು, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಅರ್ಷದ್ ಖಾನ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ, ಗುರ್ನೂರ್ ಸಿಂಗ್ ಬ್ರಾರ್, ರಶೀದ್ ಖಾನ್, ಮಾನವ್ ಸುತಾರ್, ಸಾಯಿ ಕಿಶೋರ್, ಜಯಂತ್ ಯಾದವ್, ಅಶೋಕ್ ಶರ್ಮಾ, ಜೇಸನ್ ಹೋಲ್ಡರ್, ಟಾಮ್ ಬ್ಯಾಂಟನ್, ಪೃಥ್ವಿ ರಾಜ್ ಯಾರ್ರಾ, ಲ್ಯೂಕ್ ವುಡ್.