ಹುಬ್ಬಳ್ಳಿ, ಡಿಸೆಂಬರ್ 24: ಕುಂದಗೋಳ ಕ್ರಾಸ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಮಾಹಿತಿಗಳ ಪ್ರಕಾರ, ಬೆಂಕಿಯು ಮೊದಲು ಒಂದು ಡಾಬಾದಲ್ಲಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆಯೇ ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೂ ಹಬ್ಬಿದ ಪರಿಣಾಮ ನಾಲ್ಕು ಶಾಪ್ಗಳು ಅಗ್ನಿಗೆ ಆಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
