Headlines

IAS ರೋಹಿಣಿ ಸಿಂಧೂರಿಗೆ ಸಂಕಷ್ಟ ತಂದಿಟ್ಟ ಬಟ್ಟೆ ಬ್ಯಾಗ್ ಖರೀದಿ ಅಕ್ರಮ ಆರೋಪದ ಹಿನ್ನೆಲೆ ಏನು ಗೊತ್ತೇ? ಇಲ್ಲಿದೆ ಮಾಹಿತಿ

IAS ರೋಹಿಣಿ ಸಿಂಧೂರಿಗೆ ಸಂಕಷ್ಟ ತಂದಿಟ್ಟ ಬಟ್ಟೆ ಬ್ಯಾಗ್ ಖರೀದಿ ಅಕ್ರಮ ಆರೋಪದ ಹಿನ್ನೆಲೆ ಏನು ಗೊತ್ತೇ? ಇಲ್ಲಿದೆ ಮಾಹಿತಿ

ಬೆಂಗಳೂರು, ಏಪ್ರಿಲ್ 03: ಸುಮಾರು 5 ವರ್ಷಗಳ ಹಿಂದೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ ಆರೋಪಕ್ಕೆ ತುತ್ತಾಗಿದ್ದರು. ಈ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಕರ್ನಾಟಕ ಹೈಕೋರ್ಟ್ ​ಮಹತ್ವದ ಆದೇಶ ಹೊರಡಿಸಿದೆ. ದೂರುದಾರ ವಕೀಲ, ರವಿಚಂದ್ರೇಗೌಡ ಎನ್.ಆರ್ ಎನ್ನುವರು ಹೈಕೋರ್ಟ್​​​ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ತನಿಖೆಗೆ ಅನುಮತಿ ನಿರಾಕರಿಸಿದ ಸರ್ಕಾರದ ಕ್ರಮ ರದ್ದುಪಡಿಸಿದೆ. ರೋಹಿಣಿ ಸಿಂಧೂರಿಗೆ ಸಂಕಷ್ಟ ತಂದಿಟ್ಟ ಬಟ್ಟೆ ಬ್ಯಾಗ್ ಖರೀದಿ ಅಕ್ರಮ ಆರೋಪದ ಹಿನ್ನೆಲೆ ಏನು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

ಸರ್ಕಾರದ ಖಜಾನೆ ಖಾಲಿ ಮಾಡಿದ ಆರೋಪ

2021ರಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ, ಪ್ಲಾಸ್ಟಿಕ್ ಮುಕ್ತ ಅಭಿಯಾನದ ಭಾಗವಾಗಿ ಮೈಸೂರು ಮಹಾನಗರ ಪಾಲಿಕೆ ಮತ್ತು ಇತರ ಸ್ಥಳೀಯ ಸಂಸ್ಥೆಗಳಿಗೆ ವಿತರಿಸಲು ಸುಮಾರು 14 ಕೋಟಿ 71 ಲಕ್ಷ ರೂ. ಮೌಲ್ಯದ ಬಟ್ಟೆ ಬ್ಯಾಗ್‌ಗಳನ್ನು ಖರೀದಿಸಲು ರೋಹಿಣಿ ಸಿಂಧೂರಿ ಅನುಮೋದನೆ ನೀಡಿದ್ದರು. ಮಾರುಕಟ್ಟೆಯಲ್ಲಿ ಒಂದು ಬ್ಯಾಗ್‌ನ ಬೆಲೆ ಸುಮಾರು 13 ರೂ. ಇದ್ದರೂ, ನಿಯಮಗಳನ್ನು ಮೀರಿ ಪ್ರತಿ ಬ್ಯಾಗ್‌ಗೆ 52 ರೂ.ನಂತೆ (ಜಿಎಸ್‌ಟಿ ಸೇರಿ) ಖರೀದಿಸಲಾಗಿದೆ ಎಂದು ಅವರ ಮೇಲೆ ಆರೋಪ ಮಾಡಲಾಗಿತ್ತು. ಈ ದುಬಾರಿ ಖರೀದಿಯಿಂದಾಗಿ ಸರ್ಕಾರದ ಖಜಾನೆಗೆ ಸುಮಾರು 5.88 ಕೋಟಿಯಿಂದ 7.65 ಕೋಟಿ ರೂ.ವರೆಗೆ ನಷ್ಟವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ರವಿಚಂದ್ರ ಗೌಡ ದೂರು ದಾಖಲಿಸಿದ್ದರು.

ರೋಹಿಣಿ ಸಿಂಧೂರಿಗೆ ಕ್ಲೀನ್ ಚಿಟ್ ನೀಡಿದ್ದ ರಾಜ್ಯ ಸರ್ಕಾರ

ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (KTPP) ಕಾಯ್ದೆಯನ್ನು ಉಲ್ಲಂಘಿಸಿ ಈ ಖರೀದಿ ಮಾಡಲಾಗಿದೆ ಎಂದು ಪ್ರಾಥಮಿಕ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ (KHDC) ಮೂಲಕವೇ ಈ ಬ್ಯಾಗ್‌ಗಳನ್ನು ಪಡೆಯಲು ವಿನಾಯಿತಿ ನೀಡಲಾಗಿತ್ತು ಎಂದು ಮಾಜಿ ಶಾಸಕ ಸಾ.ರಾ. ಮಹೇಶ್ ಆರೋಪಿಸಿದ್ದರು. ಈ ಹಿಂದೆ ರಾಜ್ಯ ಸರ್ಕಾರವು ಇಲಾಖಾ ವಿಚಾರಣೆಯಲ್ಲಿ ರೋಹಿಣಿ ಸಿಂಧೂರಿಗೆ ಕ್ಲೀನ್ ಚಿಟ್ ನೀಡಿ, ಕ್ರಿಮಿನಲ್ ತನಿಖೆಗೆ ಅನುಮತಿ ನಿರಾಕರಿಸಿತ್ತು.

ಇದನ್ನೂ ಓದಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ: IAS ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಅನುಮತಿ ನೀಡಿ ಹೈಕೋರ್ಟ್ ಆದೇಶ

ಹೈ ಕೋರ್ಟ್​ ಹೇಳಿದ್ದೇನು?

ಆದರೆ ಹೈಕೋರ್ಟ್ ಈ ಆದೇಶವನ್ನು ರದ್ದುಗೊಳಿಸಿ, ಭ್ರಷ್ಟಾಚಾರ ಕ್ಯಾನ್ಸರ್, ಪ್ಲೇಗ್ ಇದ್ದಂತೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಹಾಗೇ ಬಿಟ್ಟರೆ ಪ್ರಜಾಸತ್ತಾತ್ಮಕ ಅಂಗಗಳನ್ನು ಅಸ್ಥಿರಗೊಳಿಸುತ್ತದೆ. ಭ್ರಷ್ಟಾಚಾರದ ಆರೋಪವಿದ್ದಾಗ ತನಿಖೆ ನಡೆಯದೇ ಸತ್ಯ ಬಹಿರಂಗವಾಗುವುದಿಲ್ಲ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *