ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಿಂದ ಸೋತಿತು. ಅದಾಗ್ಯೂ ತಂಡದ ನಾಯಕ ಶುಭ್ಮನ್ ಗಿಲ್ ಇಡೀ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದರು. ಆಡಿದ ಮೂರು ಪಂದ್ಯಗಳಲ್ಲಿ ಗಿಲ್ ಎರಡು ಅರ್ಧಶತಕಗಳನ್ನು ಬಾರಿಸಿದರು. ಆದರೆ ಇದರ ಹೊರತಾಗಿಯೂ, ಶುಭ್ಮನ್ ಗಿಲ್ಗೆ ಏಕದಿನ ಕ್ರಿಕೆಟ್ನಲ್ಲಿ ನಂಬರ್ ಒನ್ ಪಟ್ಟ ಕೂದಲೆಳೆ ಅಂತರದಲ್ಲಿ ಕೈತಪ್ಪಿದೆ(PC-PTI).
ಐಸಿಸಿ ಬಿಡುಗಡೆ ಮಾಡಿರುವ ಇತ್ತೀಚಿನ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ಶುಭ್ಮನ್ ಗಿಲ್ ಎರಡನೇ ಸ್ಥಾನದಲ್ಲಿಯೇ ಮುಂದುವರೆದಿದ್ದಾರೆ. ಮೇಲೆ ಹೇಳಿದಂತೆ ಶುಭ್ಮನ್ ಗಿಲ್ ಕೇವಲ ಒಂದು ಅಂಕದಿಂದ ಮೊದಲ ಸ್ಥಾನಕ್ಕೇರುವ ಅವಕಾಶದಿಂದ ವಂಚಿತರಾಗಿದ್ದಾರೆ(PC-PTI).
ಶುಭ್ಮನ್ ಗಿಲ್ ಪ್ರಸ್ತುತ 801 ರೇಟಿಂಗ್ ಅಂಕಗಳೊಂದಿಗೆ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್ನ ಡ್ಯಾರಿಲ್ ಮಿಚೆಲ್ 802 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಉಳಿದಂತೆ ವಿರಾಟ್ ಕೊಹ್ಲಿ 767 ಪಾಯಿಂಟ್ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ 758 ಪಾಯಿಂಟ್ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ(PC-PTI).
ಶುಭಮನ್ ಗಿಲ್ ಕಳೆದ ಎರಡು ಪಂದ್ಯಗಳಲ್ಲಿ 107 ರನ್ ಗಳಿಸಿದ್ದರೂ ಎರಡು ಅಂಕಗಳನ್ನು ಕಳೆದುಕೊಂಡರು. ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದ ನಂತರ ಅವರು 803 ರೇಟಿಂಗ್ ಪಾಯಿಂಟ್ಗಳನ್ನು ಹೊಂದಿದ್ದರು, ಆದರೆ ಎರಡನೇ ಮತ್ತು ಮೂರನೇ ಏಕದಿನ ಪಂದ್ಯಗಳ ನಂತರ ಗಿಲ್ ಎರಡು ಅಂಕಗಳನ್ನು ಕಳೆದುಕೊಂಡಿದ್ದು ಅವರ ಪಾಯಿಂಟ್ಸ್ 801 ಕ್ಕೆ ಇಳಿದಿದೆ(PC-PTI).
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಶುಭ್ಮನ್ ಗಿಲ್ ಆಡಿದ ಮೂರು ಪಂದ್ಯಗಳಲ್ಲಿ 94 ಸರಾಸರಿಯಲ್ಲಿ 188 ರನ್ ಕಲೆಹಾಕಿದರು. ಆ ಮೂರು ಪಂದ್ಯಗಳಲ್ಲಿ 99.47 ಸ್ಟ್ರೈಕ್ ರೇಟ್ನಲ್ಲಿ ಅವರು ಎರಡು ಅರ್ಧಶತಕಗಳನ್ನು ಸಿಡಿಸಿದರು(PC-PTI).
