ICC T20I Rankings: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಐಸಿಸಿ ಟಿ20 ಬ್ಯಾಟರ್ಗಳ ನೂತನ ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿಯ ಟಾಪ್-10 ಪಟ್ಟಿಯಲ್ಲಿ ಟೀಮ್ ಇಂಡಿಯಾದ ನಾಲ್ವರು ಬ್ಯಾಟರ್ಗಳು ಸ್ಥಾನ ಪಡೆದಿದ್ದಾರೆ. ಅವರಲ್ಲಿರಿಬ್ಬರು ಅಗ್ರಸ್ಥಾನಗಳಲ್ಲಿರುವುದು ವಿಶೇಷ. ಐಸಿಸಿ ಟಿ20 ಬ್ಯಾಟರ್ಗಳ ನೂತನ ಶ್ರೇಯಾಂಕ ಪಟ್ಟಿ ಈ ಕೆಳಗಿನಂತಿದೆ…
1- ಅಭಿಷೇಕ್ ಶರ್ಮಾ: ಟೀಮ್ ಇಂಡಿಯಾದ ಯುವ ದಾಂಡಿಗ ಅಭಿಷೇಕ್ ಶರ್ಮಾ ಈ ಬಾರಿ ಕೂಡ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಟಿ20 ವಿಶ್ವಕಪ್ನಲ್ಲಿನ ಕಳಪೆ ಪ್ರದರ್ಶನದ ಕಾರಣ ರೇಟಿಂಗ್ನಲ್ಲಿ ಕುಸಿತ ಕಂಡಿದ್ದು, ಇದಾಗ್ಯೂ 875 ಅಂಕಗಳೊಂದಿಗೆ ಮೊದಲ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.
2- ಇಶಾನ್ ಕಿಶನ್: ಭಾರತ ತಂಡದ ಯುವ ಎಡಗೈ ಬ್ಯಾಟರ್ ಇಶಾನ್ ಕಿಶನ್ ಈ ಬಾರಿ 2 ಸ್ಥಾನ ಮೇಲೇರಿದ್ದಾರೆ. ಟಿ20 ವಿಶ್ವಕಪ್ನಲ್ಲಿ ಪ್ರಚಂಡ ಪ್ರದರ್ಶನದ ಫಲವಾಗಿ ಇದೀಗ 871 ಅಂಕಗಳೊಂದಿಗೆ ದ್ವಿತೀಯ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. ಅಂದರೆ ಅಭಿಷೇಕ್ ಹಾಗೂ ಇಶಾನ್ ನಡುವಣ ಅಂಕಗಳ ವ್ಯತ್ಯಾಸ ಕೇವಲ 4 ಮಾತ್ರ.
3- ಸಾಹಿಬ್ಝಾದ ಫರ್ಹಾನ್: ಟಿ20 ವಿಶ್ವಕಪ್ನಲ್ಲಿ 381 ರನ್ ಕಲೆಹಾಕುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದ ಪಾಕಿಸ್ತಾನ್ ಬ್ಯಾಟರ್ ಸಾಹಿಬ್ಝಾದ ಫರ್ಹಾನ್ 848 ಅಂಕಗಳೊಂದಿಗೆ ಈ ಬಾರಿಯ ಶ್ರೇಯಾಂಕದಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ.
4- ಫಿಲ್ ಸಾಲ್ಟ್: ಇಂಗ್ಲೆಂಡ್ ತಂಡದ ಆರಂಭಿಕ ದಾಂಡಿಗ ಫಿಲ್ ಸಾಲ್ಟ್ ನೂತನ ಶ್ರೇಯಾಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಒಟ್ಟು 792 ಅಂಕಗಳನ್ನು ಪಡೆದಿರುವ ಸಾಲ್ಟ್ ಕಳೆದ ಬಾರಿಗಿಂತ ಒಂದು ಸ್ಥಾನ ಕುಸಿತ ಕಂಡಿದ್ದಾರೆ.
5- ಪಾತುಮ್ ನಿಸ್ಸಂಕಾ: ಟಿ20 ವಿಶ್ವಕಪ್ನಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದ ಶ್ರೀಲಂಕಾ ತಂಡದ ಒಪನರ್ ಪಾತುಮ್ ನಿಸ್ಸಂಕಾ ಈ ಬಾರಿ 5ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ನಿಸ್ಸಂಕಾ ಒಟ್ಟು 766 ಅಂಕಗಳೊಂದಿಗೆ ಟಾಪ್-5 ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು 6ನೇ ಸ್ಥಾನದಲ್ಲಿ ನ್ಯೂಝಿಲೆಂಡ್ನ ಟಿಮ್ ಸೈಫರ್ಟ್ (749) ಇದ್ದು, 7ನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ತಿಲಕ್ ವರ್ಮಾ (742) ಕಾಣಿಸಿಕೊಂಡಿದ್ದಾರೆ. ಹಾಗೆಯೇ 8ನೇ ಸ್ಥಾನದಲ್ಲಿ ಸೌತ್ ಆಫ್ರಿಕಾದ ಡೆವಾಲ್ಡ್ ಬ್ರೆವಿಸ್ (738) ಇದ್ದರೆ, 9ನೇ ಸ್ಥಾನದಲ್ಲಿ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ (722) ಕಾಣಿಸಿಕೊಂಡಿದ್ದಾರೆ. ಇನ್ನು ಇಂಗ್ಲೆಂಡ್ನ ಜೋಸ್ ಬಟ್ಲರ್ (716) 10ನೇ ಸ್ಥಾನ ಪಡೆದುಕೊಂಡಿದ್ದಾರೆ.
