ಶ್ರೀಲಂಕಾದ ದಂಬುಲ್ಲಾ ಕ್ರೀಡಾಂಗಣದಲ್ಲಿ ನಡೆದ ಭಾರತ ಎ ಹಾಗೂ ಶ್ರೀಲಂಕಾ ಎ ತಂಡಗಳ ನಡುವಿನ ತ್ರಿಕೋನ ಏಕದಿನ ಸರಣಿಯ ಫೈನಲ್ ಪಂದ್ಯದಲ್ಲಿ ಆತಿಥೇಯ ತಂಡವನ್ನು ಸೋಲಿಸಿದ ಭಾರತ ಎ ತಂಡ ತ್ರಿಕೋನ ಸರಣಿಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಈ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಎ ತಂಡ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಬ್ಯಾಟಿಂಗ್ನಿಂದಾಗಿ ನಿಗದಿತ 50 ಓವರ್ಗಳಲ್ಲಿ 378 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಶ್ರೀಲಂಕಾ ನಿಯಮಿತ ಅಂತರಗಳಲ್ಲಿ ವಿಕೆಟ್ ಕಳೆದುಕೊಂಡು ಸೋಲಿಗೆ ಶರಣಾಯಿತು. ಈ ಮೂಲಕ ಭಾರತ ತಂಡ ಸತತ 7ನೇ ತ್ರಿಕೋನ ಸರಣಿಯನ್ನು ಗೆದ್ದ ದಾಖಲೆಯೊಂದಿಗೆ ಈ ಪ್ರವಾಸವನ್ನು ಅಂತ್ಯಗೊಳಿಸಿದೆ.