Headlines

IND A vs SL A: ಶ್ರೀಲಂಕಾ ತಂಡಕ್ಕೆ ಸ್ಪರ್ಧಾತ್ಮಕ ಗುರಿ ನೀಡಿದ ಟೀಮ್ ಇಂಡಿಯಾ – Kannada News | Sri Lanka A vs India A: Team India All Out For 265 Runs

ಭಾರತ, ಶ್ರೀಲಂಕಾ, ಅಫ್ಘಾನಿಸ್ತಾನ್ ಎ ತಂಡಗಳ ನಡುವಣ ತ್ರಿಕೋನ ಸರಣಿಯ 4ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡವು 265 ರನ್​​ಗಳಿಸಿದೆ.  ದಂಬುಲ್ಲಾದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಎ ತಂಡದ ನಾಯಕ ಸಹನ್ ಅರಾಚ್ಚಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಗಿತ್ತು.

ಆರಂಭಿಕರಾದ ವೈಭವ್ ಸೂರ್ಯವಂಶಿ (21) ಹಾಗೂ ಪ್ರಭ್​ಸಿಮ್ರಾನ್ ಸಿಂಗ್ (11) ಬೇಗನೆ ಔಟಾಗಿದ್ದರು. ಈ ಹಂತದಲ್ಲಿ ಜೊತೆಗೂಡಿದ ರುತುರಾಜ್ ಗಾಯಕ್ವಾಡ್ (37) ಹಾಗೂ ತಿಲಕ್ ವರ್ಮಾ (23) ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಆದರೆ ಆ ಬಳಿಕ ಬಂದ ಆಯುಷ್ ಬದೋನಿ ಕೇವಲ 15 ರನ್​ಗಳಿಸಿ ಔಟಾದರೆ, ನಿಶಾಂತ್ ಸಿಂಧು 6 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಈ ವೇಳೆ ಕಣಕ್ಕಿಳಿದ ಸೂರ್ಯಾಂಶ್ ಶೆಡ್ಗೆ 66 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 77 ರನ್ ಬಾರಿಸಿದರು.

ಮತ್ತೊಂದೆಡೆ ಉತ್ತಮ ಸಾಥ್ ನೀಡಿದ ವಿಪ್ರಾಜ್ ನಿಗಮ್ 49 ಎಸೆತಗಳಲ್ಲಿ 6 ಫೋರ್​ಗಳೊಂದಿಗೆ 51 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಭಾರತ ಎ ತಂಡ 49.2 ಓವರ್​ಗಳಲ್ಲಿ 265 ರನ್​ ಬಾರಿಸಿ ಆಲೌಟ್ ಆಗಿದೆ.

ಇದೀಗ 266 ರನ್​ಗಳ ಗುರಿ ಬೆನ್ನತ್ತಲಾರಂಭಿಸಿರುವ ಶ್ರೀಲಂಕಾ ತಂಡವು 5 ಓವರ್​ಗಳ ಮುಕ್ತಾಯದ ವೇಳೆಗೆ ಯಾವುದೇ ವಿಕೆಟ್ ನಷ್ಟವಿಲ್ಲದೆ 45 ರನ್ ಕಲೆಹಾಕಿದೆ.

ಶ್ರೀಲಂಕಾ ಎ ಪ್ಲೇಯಿಂಗ್ 11: ನಿರೋಷನ್ ಡಿಕ್ವೆಲ್ಲಾ (ವಿಕೆಟ್ ಕೀಪರ್) , ಅವಿಷ್ಕಾ ಫೆರ್ನಾಂಡೊ , ವಿಷೇನ್ ಹಾಲಂಬಗೆ , ಸದೀರ ಸಮರವಿಕ್ರಮ , ಅಹಾನ್ ವಿಕ್ರಮಸಿಂಘೆ , ಸಹನ್ ಅರಚ್ಚಿಗೆ (ನಾಯಕ) , ವನುಜಾ ಸಹನ್ , ವಿಜಯಕಾಂತ್ ವಿಯಸ್ಕಾಂತ್ , ಕುಗಥಾಸ್ ಮಥುಲನ್ , ಮೊಹಮ್ಮದ್ ಶಿರಾಜ್ , ಚಾಮಿಕಾ ಗುಣಶೇಖರ.

ಇದನ್ನೂ ಓದಿ: ಮೊದಲ ಪಂದ್ಯದಲ್ಲೇ 7 ಗೋಲು ಬಾರಿಸಿ ವಿಶ್ವ ದಾಖಲೆ ಬರೆದ ಜರ್ಮನಿ!

ಭಾರತ ಎ ಪ್ಲೇಯಿಂಗ್ 11: ಪ್ರಭ್​ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್ ), ವೈಭವ್ ಸೂರ್ಯವಂಶಿ , ರುತುರಾಜ್ ಗಾಯಕ್ವಾಡ್ , ತಿಲಕ್ ವರ್ಮಾ (ನಾಯಕ) , ಆಯುಷ್ ಬದೋನಿ , ಸೂರ್ಯಾಂಶ್ ಶೆಡ್ಗೆ , ನಿಶಾಂತ್ ಸಿಂಧು , ಅನುಕೂಲ್ ರಾಯ್ , ಅರ್ಷದ್ ಖಾನ್ , ವಿಪ್ರಾಜ್ ನಿಗಮ್ , ಯಶ್ ಠಾಕೂರ್.

Source link

Leave a Reply

Your email address will not be published. Required fields are marked *