ಶ್ರೀಲಂಕಾದ ದಂಬಲ್ಲಾದಲ್ಲಿ ನಡೆದ ತ್ರಿಕೋನ ಸರಣಿಯ 5ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ಎ ಹಾಗೂ ಭಾರತ ಎ ತಂಡಗಳು ಮುಖಾಮುಖಿಯಾಗಿದ್ದವು. ಫೈನಲ್ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಉಭಯ ತಂಡಗಳಿಗೆ ಈ ಪಂದ್ಯದಲ್ಲಿನ ಗೆಲುವು ಅತ್ಯವಶ್ಯಕವಾಗಿತ್ತು. ಅದರಲ್ಲೂ ಸತತ ಎರಡು ಪಂದ್ಯಗಳನ್ನು ಸೋತಿದ್ದ ಭಾರತ ಎ ತಂಡ ಫೈನಲ್ ರೇಸ್ನಲ್ಲಿ ಉಳಿಯಬೇಕೆಂದರೆ ಈ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಅದರಂತೆ ಈ ನಿರ್ಣಾಯಕ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಭಾರತ ಎ ತಂಡ 101 ರನ್ಗಳಿಂದ ಅಫ್ಘಾನಿಸ್ತಾನ ಎ ತಂಡವನ್ನು ಸೋಲಿಸುವ ಮೂಲಕ ಹಿಂದಿನ ಸೋಲಿಗೆ ಸೇಡು ತೀರಿಸಿಕೊಂಡಿದ್ದಲ್ಲದೆ ಅಧಿಕೃತವಾಗಿ ಫೈನಲ್ಗೂ ಟಿಕೆಟ್ ಪಡೆದುಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಎ 319 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಅಫ್ಘನ್ ಎ ಕೇವಲ218 ರನ್ಗಳಿಗೆ ಆಲೌಟ್ ಆಯಿತು.