
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯ ಇಂದಿನಿಂದ ಆರಂಭವಾಗಿದೆ. ಇದಾದ ಬಳಿಕ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಈ ಸರಣಿಗಾಗಿ ಬಿಸಿಸಿಐ ತಂಡವನ್ನು ಪ್ರಕಟಿಸಿತ್ತು. ಆದರೀಗ ಆ ತಂಡಕ್ಕೆ ಬದಲಿ ಆಟಗಾರನಾಗಿ ಯಶಸ್ವಿ ಜೈಸ್ವಾಲ್ ಅವರನ್ನು ಬಿಸಿಸಿಐ ಆಯ್ಕೆ ಮಾಡಿದೆ. ವಾಸ್ತವವಾಗಿ ತಂಡದ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಈ ಸರಣಿಯಿಂದ ಹೊರಗಿಡಲಾಗಿದೆ. ಅವರ ಬದಲಿಯಾಗಿ ಜೈಸ್ವಾಲ್ಗೆ ಅವಕಾಶ ನೀಡಲಾಗಿದೆ. ಕೊಹ್ಲಿ ಸರಣಿಯಲ್ಲಿ ಆಡುತ್ತಿಲ್ಲ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿತ್ತು. ಆದರೀಗ ಅಧಿಕೃತ ಮಾಹಿತಿ ನೀಡಿರುವ ಬಿಸಿಸಿಐ, ಕೊಹ್ಲಿ ಚೇತರಿಕೆಗೆ ಸಮಯಾವಕಾಶ ಮಾಡಿಕೊಟ್ಟಿದೆ.