
ಧರ್ಮಶಾಲಾದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಏಕದಿನ ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ ಸುಲಭವಾಗಿ ಗೆದ್ದುಕೊಂಡಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಮಳೆ ಪೀಡಿತ ಈ ಪಂದ್ಯವನ್ನು ತಲಾ 25 ಓವರ್ಗಳಿಗೆ ಸೀಮಿತಗೊಳಿಸಲಾಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ ಆರಂಭಿಕ ರಹಮಾನುಲ್ಲಾ ಗುರ್ಬಾಜ್ ಅವರ ಸ್ಫೋಟಕ ಶತಕದ ನೆರವಿನಿಂದ 194 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ನಾಯಕ ಶುಭ್ಮನ್ ಗಿಲ್ ಅವರ ಅಜೇಯ ಅರ್ಧಶತಕದ ಇನ್ನಿಂಗ್ಸ್ ಹಾಗೂ ಕೆಎಲ್ ರಾಹುಲ್ ಅವರ ಸ್ಫೋಟಕ ಬ್ಯಾಟಿಂಗ್ನಿಂದಾಗಿ 3 ವಿಕೆಟ್ಗಳನ್ನು ಕಳೆದುಕೊಂಡು ಗೆಲುವಿನ ದಡ ಮುಟ್ಟಿತು.