ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯವನ್ನು ಆತಿಥೇಯ ಭಾರತ 9 ವಿಕೆಟ್ಗಳಿಂದ ಗೆದ್ದುಕೊಂಡಿದೆ. ಏಕದಿನ ಸರಣಿಗೂ ಮುನ್ನ ನಡೆದಿದ್ದ ಏಕೈಕ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಜಯ ಸಾಧಿಸಿದ್ದ ಟೀಂ ಇಂಡಿಯಾ, ಇದೀಗ ಏಕದಿನ ಸರಣಿಯನ್ನು ಸಹ ಕ್ಲೀನ್ ಸ್ವೀಪ್ ಮಾಡಿದೆ. ಅಂದರೆ ಭಾರತದ ಪ್ರವಾಸದಲ್ಲಿ ಅಫ್ಘಾನಿಸ್ತಾನ ತಂಡಕ್ಕೆ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಇನ್ನು ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 218 ರನ್ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಭಾರತ ಕೇವಲ 1 ವಿಕೆಟ್ ಕಳೆದುಕೊಂಡು 28.4 ಓವರ್ಗಳಲ್ಲಿ ಗೆಲುವಿನ ದಡ ಮುಟ್ಟಿತು.
