2026 ರ ಐಪಿಎಲ್ ಮುಗಿದ ಬಳಿಕ ಟೀಂ ಇಂಡಿಯಾ ಹಾಗೂ ಅಫ್ಘಾನಿಸ್ತಾನದ ನಡುವೆ ಒಂದು ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳ ಸರಣಿ ನಡೆಯಲಿದೆ. ಭಾರತದ ಆತಿಥ್ಯದಲ್ಲಿ ನಡೆಯಲಿರುವ ಈ ಸರಣಿಗೆ ಬಿಸಿಸಿಐ ಈಗಾಗಲೇ ತಂಡಗಳನ್ನು ಪ್ರಕಟಿಸಿದೆ. ಇದೀಗ ಐಪಿಎಲ್ ಪ್ಲೇಆಫ್ ನಡುವೆ ಅಫ್ಘಾನಿಸ್ತಾನ ಕೂಡ ತನ್ನ ತಂಡವನ್ನು ಪ್ರಕಟಿಸಿದೆ. ಹಶ್ಮತುಲ್ಲಾ ಶಾಹಿದಿ ನಾಯಕತ್ವದಲ್ಲಿ ಅಫ್ಘಾನಿಸ್ತಾನದ ಟೆಸ್ಟ್ ಮತ್ತು ಏಕದಿನ ತಂಡಗಳೆರಡನ್ನು ಪ್ರಕಟಿಸಲಾಗಿದೆ. ಟೆಸ್ಟ್ ಪಂದ್ಯಕ್ಕೆ ರಶೀದ್ ಖಾನ್ ಮತ್ತು ಇಬ್ರಾಹಿಂ ಜದ್ರಾನ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ರಹಮಾನುಲ್ಲಾ ಜದ್ರಾನ್, ಬಿಲಾಲ್ ಸಮಿ ಮತ್ತು ನೆಂಗಿಯಾಲಿಯಾ ಖರೋಟೆ ಅವರನ್ನು ಮೊದಲ ಬಾರಿಗೆ ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲಾಗಿದೆ.
ಭಾರತ-ಅಫ್ಘಾನಿಸ್ತಾನ ಸರಣಿ ವೇಳಾಪಟ್ಟಿ
- ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯವು ನ್ಯೂ ಚಂಡೀಗಢದ ನ್ಯೂ ಇಂಟರ್ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯವು ಜೂನ್ 6 ರಿಂದ ಪ್ರಾರಂಭವಾಗಲಿದೆ.
- ಮೊದಲ ಏಕದಿನ ಪಂದ್ಯ ಜೂನ್ 13 ರಂದು ಮಧ್ಯಾಹ್ನ 1.30 ಕ್ಕೆ ಧರ್ಮಶಾಲಾದಲ್ಲಿ ನಡೆಯಲಿದೆ.
- ಎರಡನೇ ಏಕದಿನ ಪಂದ್ಯ ಜೂನ್ 17 ರಂದು ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
- ಮೂರನೇ ಏಕದಿನ ಪಂದ್ಯ ಜೂನ್ 20 ರಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಮಧ್ಯಾಹ್ನ 1.30 ರಿಂದ ಆರಂಭವಾಗಲಿದೆ.
ಮುಖಾಮುಖಿ ದಾಖಲೆ
ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳು ಇಲ್ಲಿಯವರೆಗೆ ನಾಲ್ಕು ಏಕದಿನ ಪಂದ್ಯಗಳನ್ನು ಆಡಿದ್ದು, ಅವುಗಳಲ್ಲಿ ಟೀಂ ಇಂಡಿಯಾ ಮೂರರಲ್ಲಿ ಗೆದ್ದಿದೆ. ಒಂದು ಪಂದ್ಯ ಟೈನಲ್ಲಿ ಕೊನೆಗೊಂಡಿದೆ. ಅಂದರೆ ಅಫ್ಘಾನಿಸ್ತಾನ ಇದುವರೆಗೆ ಭಾರತದ ವಿರುದ್ಧ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಒಂದು ಟೆಸ್ಟ್ ಪಂದ್ಯ ನಡೆದಿದ್ದು, ಆ ಪಂದ್ಯವನ್ನು ಭಾರತ ಗೆದ್ದಿದೆ.
🚨 Afghanistan Squads Are Out 🚨
Here are Afghanistan’s squads for the upcoming Test and ODI series against India, set to begin from June 6-20. 🏏
Happy with our lineups? #AfghanAtalan | #INDvAFG | #GloriousNationVictoriousTeam pic.twitter.com/Ut7cgJdEFN
— Afghanistan Cricket Board (@ACBofficials) May 26, 2026
ಅಫ್ಘಾನಿಸ್ತಾನ ಟೆಸ್ಟ್ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ಅಬ್ದುಲ್ ಮಲಿಕ್, ಸೇದಿಕುಲ್ಲಾ ಅಟಲ್, ರಹಮತ್ ಷಾ, ರಹಮಾನುಲ್ಲಾ ಗುರ್ಬಾಜ್, ರಹಮಾನುಲ್ಲಾ ಝದ್ರಾನ್, ಅಫ್ಸರ್ ಝಜೈ (ವಿಕೆಟ್ ಕೀಪರ್), ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಅಜ್ಮತುಲ್ಲಾ ಒಮರ್ಜೈ, ಶರಫುದಿನ್ ಅಶ್ರಫ್, ನಂಗ್ಯಾಲ್ ಖರೋಟೈ, ಖೈಸ್ ಅಹ್ಮದ್, ಬಿಲಾಲ್ ಸಮಿ, ಜಿಯಾ ಶರೀಫಿ, ಸಲೀಮ್ ಸಫಿ
ಅಫ್ಘಾನಿಸ್ತಾನ ಏಕದಿನ ತಂಡ: ಹಸ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ಸೇದಿಕುಲ್ಲಾ ಅಟಲ್, ದರ್ವಿಶ್ ರಸೂಲಿ, ರಹಮತ್ ಷಾ, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜೈ, ರಶೀದ್ ಖಾನ್, ನಂಗ್ಯಾಲ್ ಖರೋಟೈ, ಎಎಮ್ ಗಜನ್ಫರ್, ಜಿಯಾ ಯು ರೆಹಮಾನ್ ಶರೀಫಿ, ಫರೀದ್ ಮಲಿಕ್, ಬಿಲಾಲ್ ಸಾಮಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On – 10:29 pm, Tue, 26 May 26