Headlines

IND vs AFG: ಭಾರತ vs ಅಫ್ಘಾನಿಸ್ತಾನ್ ಪಂದ್ಯ ವಿಳಂಬ – Kannada News | India vs Afghanistan, 1st ODI: Toss delayed due to rain

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಏಕದಿನ ಸರಣಿ ಇಂದಿನಿಂದ ಶುರುವಾಗಲಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದ ಟಾಸ್ ಪ್ರಕ್ರಿಯೆ ಮಳೆಯಿಂದಾಗಿ ವಿಳಂಬವಾಗಿದೆ.

ಹೆಚ್​ಪಿಸಿಎ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 1:00 ಗಂಟೆಗೆ ಟಾಸ್ ನಡೆಯಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ಪಿಚ್ ಮತ್ತು ಔಟ್‌ಫೀಲ್ಡ್ ಅನ್ನು ಸಂಪೂರ್ಣವಾಗಿ ಮುಚ್ಚಲಾಗಿದ್ದು, ಅಭಿಮಾನಿಗಳು ಪಂದ್ಯ ಆರಂಭಕ್ಕಾಗಿ ಕಾದು ಕುಳಿತುಕೊಳ್ಳುವಂತಾಗಿದೆ.

ಹವಾಮಾನ ಹೇಗಿದೆ?

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಧರ್ಮಶಾಲಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಪಂದ್ಯದ ಅವಧಿಯಲ್ಲಿ ಸುಮಾರು ಶೇ. 90 ರಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.

ಮಳೆ ನಿಂತರೂ ಸಹ ಔಟ್‌ಫೀಲ್ಡ್ ಅನ್ನು ಒಣಗಿಸಲು ಮೈದಾನದ ಸಿಬ್ಬಂದಿಗೆ ಹೆಚ್ಚಿನ ಸಮಯ ಬೇಕಾಗುವುದರಿಂದ, ಪಂದ್ಯದ ಓವರ್‌ಗಳನ್ನು ಕಡಿತಗೊಳಿಸುವ ಸಾಧ್ಯತೆ ದಟ್ಟವಾಗಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಸರಣಿಯ ಎಲ್ಲಾ ಪಂದ್ಯಗಳನ್ನು  ಟಿವಿಯಲ್ಲಿ ‘ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್’ ಮೂಲಕ ವೀಕ್ಷಿಸಬಹುದು. ಹಾಗೆಯೇ ಮೊಬೈಲ್ ಹಾಗೂ ಡಿಜಿಟಲ್ ಪರದೆಯಲ್ಲಿ ‘ಜಿಯೋಸ್ಟಾರ್’  ಆ್ಯಪ್ ಮೂಲಕ ಲೈವ್ ಸ್ಟ್ರೀಮಿಂಗ್ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ಉಭಯ ತಂಡಗಳ ಮುಖಾಮುಖಿ?

ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ ಈವರೆಗೆ ಒಟ್ಟು 4 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಮೂರು ಬಾರಿ ಟೀಮ್ ಇಂಡಿಯಾ ಗೆಲುವು ಸಾಧಿಸಿದೆ. ಇನ್ನು ಒಂದು ಪಂದ್ಯವು ಟೈನಲ್ಲಿ ಅಂತ್ಯಗೊಳಿಸುವಲ್ಲಿ ಅಫ್ಘಾನಿಸ್ತಾನ್ ತಂಡ ಯಶಸ್ವಿಯಾಗಿತ್ತು.

  • 2014ರ ಏಷ್ಯಾ ಕಪ್: ಭಾರತಕ್ಕೆ 8 ವಿಕೆಟ್‌ಗಳ ಗೆಲುವು.
  • 2018ರ ಏಷ್ಯಾ ಕಪ್: ಪಂದ್ಯ ರೋಚಕ ‘ಟೈ’ ಆಗಿತ್ತು.
  • 2019ರ ಏಕದಿನ ವಿಶ್ವಕಪ್: ಭಾರತಕ್ಕೆ 11 ರನ್‌ಗಳ ರೋಚಕ ಗೆಲುವು.
  • 2023ರ ಏಕದಿನ ವಿಶ್ವಕಪ್: ಭಾರತಕ್ಕೆ 8 ವಿಕೆಟ್‌ಗಳ ಭರ್ಜರಿ ಜಯ

ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ) , ಕೆಎಲ್ ರಾಹುಲ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ , ಯಶಸ್ವಿ ಜೈಸ್ವಾಲ್ , ಇಶಾನ್ ಕಿಶನ್ , ಶ್ರೇಯಸ್ ಅಯ್ಯರ್ , ವಾಷಿಂಗ್ಟನ್ ಸುಂದರ್ , ನಿತೀಶ್ ಕುಮಾರ್ ರೆಡ್ಡಿ , ಹರ್ಷ್ ದುಬೆ , ಕುಲ್ದೀಪ್ ಯಾದವ್ , ಅರ್ಷದೀಪ್ ಸಿಂಗ್ , ಗುರ್ನೂರ್ ಬ್ರಾರ್ , ಪ್ರಸಿದ್ಧ್ ಕೃಷ್ಣ , ಪ್ರಿನ್ಸ್ ಯಾದವ್.

ಇದನ್ನೂ ಓದಿ: 24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಜೋರ್ಡನ್ ಕಾಕ್ಸ್​

ಅಫ್ಘಾನಿಸ್ತಾನ್ ಏಕದಿನ ತಂಡ: ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಝದ್ರಾನ್, ಸೇದಿಕುಲ್ಲಾ ಅಟಲ್, ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮತ್ ಶಾ, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಅಝ್ಮತ್​ ಒಮರ್​ಝಾಹಿ, ಮೊಹಮ್ಮದ್ ನಬಿ, ರಶೀದ್ ಖಾನ್, ನಂಗೆಯಾಲಿಯಾ ಖರೋಟಿ, ಅಲ್ಲಾ ಗಝನ್​ಫರ್, ಬಿಲಾಲ್ ಸಮಿ, ದರ್ವೀಶ್ ರಸೂಲಿ, ಫರೀದ್ ಮಲಿಕ್, ಝಿಯಾ ಉರ್ ರೆಹಮಾನ್ ಶರೀಫಿ.

Source link

Leave a Reply

Your email address will not be published. Required fields are marked *