IND vs ENG: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಬಿದ್ದ ಟೀಂ ಇಂಡಿಯಾದ ಸ್ಟಾರ್ ಓಪನರ್ – Kannada News | IND W vs ENG W: Lord’s Test Debut; Priya Punia Replaces Pratika Rawal

ಒಂದೆಡೆ ಭಾರತ ಹಾಗೂ ಇಂಗ್ಲೆಂಡ್ ಪುರುಷರ ತಂಡಗಳ ನಡುವೆ ಐದು ಪಂದ್ಯಗಳ ಟಿ20 ಸರಣಿ ನಡೆಯುತ್ತಿದ್ದರೆ, ಮತ್ತೊಂದೆಡೆ ಉಭಯ ದೇಶಗಳ ಮಹಿಳಾ ತಂಡಗಳು ಏಕೈಕ ಟೆಸ್ಟ್ ಪಂದ್ಯವನ್ನು ಆಡಲು ಸಜ್ಜಾಗಿವೆ. ಎರಡೂ ತಂಡಗಳು ಐತಿಹಾಸಿಕ ಲಾರ್ಡ್ಸ್‌ ಮೈದಾನದಲ್ಲಿ ಟೆಸ್ಟ್ ಪಂದ್ಯವನ್ನು ಆಡಲಿವೆ. ಗಮನಿಸಬೇಕಾದ ಸಂಗತಿಯೆಂದರೆ ಮೊದಲ ಬಾರಿಗೆ, ಲಾರ್ಡ್ಸ್‌ನಲ್ಲಿ ಮಹಿಳಾ ಟೆಸ್ಟ್ ಪಂದ್ಯ ನಡೆಯಲಿದೆ.

ಭಾರತ ಮತ್ತು ಇಂಗ್ಲೆಂಡ್ ಮಹಿಳಾ ತಂಡಗಳ ನಡುವಿನ ಐತಿಹಾಸಿಕ ಟೆಸ್ಟ್ ಪಂದ್ಯವು ಜುಲೈ 10 ರಿಂದ 13 ರವರೆಗೆ ನಡೆಯಲಿದೆ. ಈ ಪಂದ್ಯಕ್ಕಾಗಿ ಟೀಂ ಇಂಡಿಯಾವನ್ನು ಈಗಾಗಲೇ ಪ್ರಕಟಿಸಲಾಗಿದ್ದು, ತಂಡ ಕೂಡ ಇಂಗ್ಲೆಂಡ್​ನಲ್ಲಿದೆ. ಆದರೆ ಪಂದ್ಯ ಆರಂಭಕ್ಕೆ ಎರಡು ದಿನಗಳಿರುವಾಗ ಭಾರತ ವನಿತಾ ಪಡೆಗೆ ಆಘಾತ ಎದುರಾಗಿದೆ.

ಭಾರತ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ಪ್ರತೀಕಾ ರಾವಲ್ ಈ ಐತಿಹಾಸಿಕ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ ಎಂಬ ಮಾಹಿತಿಯನ್ನು ತಂಡದ ಮುಖ್ಯ ಕೋಚ್ ಅಮೋಲ್ ಮುಜುಂದಾರ್ ತಿಳಿಸಿದ್ದಾರೆ. ಹೀಗಾಗಿ ಪ್ರತೀಕಾ ರಾವಲ್ ಬದಲಿಗೆ ಇತ್ತೀಚಿನ ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ಎ ತಂಡದ ಭಾಗವಾಗಿದ್ದ ಅನುಭವಿ ಬ್ಯಾಟರ್ ಪ್ರಿಯಾ ಪುನಿಯಾ ಅವರನ್ನು ಬದಲಿ ಆಟಗಾರ್ತಿಯಾಗಿ ಆಯ್ಕೆ ಮಾಡಲಾಗಿದೆ.

ಭಾರತ ಮತ್ತು ಇಂಗ್ಲೆಂಡ್ ಮಹಿಳಾ ತಂಡಗಳು ಇಲ್ಲಿಯವರೆಗೆ ಒಟ್ಟು 14 ಟೆಸ್ಟ್ ಪಂದ್ಯಗಳು ನಡೆದಿವೆ. ಇದರಲ್ಲಿ ಭಾರತ ಮೂರು ಪಂದ್ಯಗಳನ್ನು ಗೆದ್ದಿದ್ದು, ಒಂದು ಪಂದ್ಯವನ್ನು ಸೋತಿದೆ. ಉಳಿದಂತೆ ಹತ್ತು ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡಿವೆ. ಉಭಯ ತಂಡಗಳ ನಡುವಿನ ಕೊನೆಯ ಟೆಸ್ಟ್ ಪಂದ್ಯ 2023 ರಲ್ಲಿ ನಡೆದಿತ್ತು. ಆ ಪಂದ್ಯದಲ್ಲಿ ಭಾರತೀಯ ಮಹಿಳಾ ತಂಡ ಇಂಗ್ಲೆಂಡ್ ತಂಡವನ್ನು 347 ರನ್‌ಗಳಿಂದ ಸೋಲಿಸಿತ್ತು.

ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗಸ್, ಪ್ರಿಯಾ ಪುನಿಯಾ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಶ್ರೀ ಚರಣಿ, ಯಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನಂದಿನಿ ಶರ್ಮಾ, ಹರ್ಲೀನ್ ಡಿಯೋಲ್, ರೇಣುಕಾ ಠಾಕೂರ್, ಕ್ರಾಂತಿ ಗೌಡ್, ಸಯಾಲಿ ಸತ್ಘರೆ ಮತ್ತು ಸ್ನೇಹ್ ರಾಣಾ.

Published On – 8:36 pm, Wed, 8 July 26

Source link

Leave a Reply

Your email address will not be published. Required fields are marked *