ಬರುವ ಜುಲೈ ತಿಂಗಳಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವೆ ಟಿ20 ಹಾಗೂ ಏಕದಿನ ಸರಣಿ ನಡೆಯಲಿದೆ. ಈ ಸರಣಿಗಾಗಿ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಈ ಪ್ರವಾಸದಲ್ಲಿ ಮೊದಲಿಗೆ ಉಭಯ ತಂಡಗ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಜುಲೈ 1 ರಿಂದ ಆರಂಭವಾಗಲಿರುವ ಟಿ20 ಸರಣಿ ಜುಲೈ 11 ರವರೆಗೆ ನಡೆಯಲಿದೆ. ಈ ಸರಣಿಗಾಗಿ ಬಿಸಿಸಿಐ ಈಗಾಗಲೇ ತಂಡವನ್ನು ಸಹ ಪ್ರಕಟಿಸಿತ್ತು. ಟಿ20 ಸರಣಿಯ ಬಳಿಕ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಜುಲೈ 14 ರಿಂದ ಆರಂಭವಾಗಲಿರುವ ಏಕದಿನ ಸರಣಿ ಜುಲೈ 19 ರವರೆಗೆ ನಡೆಯಲಿದ್ದು, ಇದೀಗ ಈ ಏಕದಿನ ಸರಣಿಗಾಗಿ ಬಿಸಿಸಿಐ 15 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಈ ಪ್ರವಾಸದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯುತ್ತಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದ್ದು, ಹಲವು ಯುವ ಆಟಗಾರರಿಗೂ ತಂಡದಲ್ಲಿ ಅವಕಾಶ ನೀಡಲಾಗಿದೆ.
🚨 News 🚨
India’s ODI squad for the England tour announced.
𝗡𝗢𝗧𝗘: Varun Chakaravarthy has been ruled out of the Ireland T20I Series as he continues his rehab at the BCCI COE.
More Details ▶️ https://t.co/wOdXTQqJto #TeamIndia | #ENGvIND pic.twitter.com/t0GypgM4kp
— BCCI (@BCCI) June 21, 2026
ಇಂಗ್ಲೆಂಡ್ ಪ್ರವಾಸಕ್ಕಾಗಿ ಭಾರತ ಏಕದಿನ ತಂಡ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್.
