IND vs ENG: ಟಾಸ್ ಗೆದ್ದ ಶ್ರೇಯಸ್; ಬಲಿಷ್ಠ ಪ್ಲೇಯಿಂಗ್ 11 ಕಣಕ್ಕಿಳಿಸಿದ ಭಾರತ – Kannada News | IND vs ENG T20: Playing XI and Match Preview for Chester le Street Battle

ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟಿ20 ಸರಣಿಯನ್ನು ಸೋತ ನಂತರ ಇದೀಗ ಟೀಂ ಇಂಡಿಯಾ ಮತ್ತೆ ಅಖಾಡಕ್ಕಿಳಿದಿದೆ. ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ಡರ್ಹಾಮ್‌ನ ಚೆಸ್ಟರ್-ಲೆ-ಸ್ಟ್ರೀಟ್‌ನಲ್ಲಿ ಆರಂಭವಾಗಿದೆ. ಶ್ರೇಯಸ್ ಅಯ್ಯರ್ (Shreyas Iyer) ನಾಯಕತ್ವದಲ್ಲಿ ಮೊದಲ ಸರಣಿಯನ್ನು ಸೋತ ನಂತರ, ಭಾರತ ತಂಡವು ಈ ಪಂದ್ಯದಲ್ಲಿ ಮತ್ತೆ ಪುಟಿದೇಳಲು ನೋಡುತ್ತಿದೆ. ಈ ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯರಂತಹ ಸ್ಟಾರ್ ಆಟಗಾರರಿಲ್ಲದೆ ಟೀಂ ಇಂಡಿಯಾ ಆಡುತ್ತಿದೆ. ಹೀಗಾಗಿ ಬಲಿಷ್ಠ ಇಂಗ್ಲೆಂಡ್ ವಿರುದ್ಧ ತಂಡದ ಪ್ರದರ್ಶನ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ.

ಟಾಸ್ ಗೆದ್ದ ಟೀಂ ಇಂಡಿಯಾ

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿದ್ದಾರೆ. ಇದರ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಭಾರತ ತಂಡದಲ್ಲಿ ಮೂವರು ಸ್ಪಿನ್ನರ್​ಗಳಿಗೆ ಅವಕಾಶ ನೀಡಲಾಗಿದೆ. ಉಳಿದಂತೆ ಇಬ್ಬರು ಬೌಲರ್​ಗಳು ಆಡಲಿದ್ದಾರೆ. ಆದರೆ ಬ್ಯಾಟಿಂಗ್‌ ವಿಭಾಗದಲ್ಲಿ ಯಾವುದೇ ಬದಲಾವಣೆಯಾಗದಿರುವುದು ಟೀಂ ಇಂಡಿಯಾ ಅಭಿಮಾನಿಗಳಿಗೆ ಕೊಂಚ ನಿರಾಸೆ ಮೂಡಿಸಿದೆ.

ವೈಭವ್​ಗೆ ಅವಕಾಶ ನೀಡಲಾಗಿಲ್ಲ

ಏಕೆಂದರೆ ಐರ್ಲೆಂಡ್ ವಿರುದ್ಧವೇ ವೈಭವ್ ಸೂರ್ಯವಂಶಿಯ ಪಾದಾರ್ಪಣೆಗೆ ಅವಕಾಶ ನೀಡಲಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅಲ್ಲಿ ಅವರಿಗೆ ಆಡುವ ಅವಕಾಶ ಸಿಗಲಿಲ್ಲ. ಹೀಗಾಗಿ ಇಂಗ್ಲೆಂಡ್‌ ನೆಲದಲ್ಲಿ ವೈಭವ್ ಚೊಚ್ಚಲ ಪಂದ್ಯವನ್ನಾಡಬಹುದು ಎಂದು ನಂಬಲಾಗಿತ್ತು. ಆದರೆ ಸರಣಿಯ ಮೊದಲ ಪಂದ್ಯದಲ್ಲಿ ವೈಭವ್​ಗೆ ಅವಕಾಶ ನೀಡಲಾಗಿಲ್ಲ. ಹೀಗಾಗಿ ಐರ್ಲೆಂಡ್ ವಿರುದ್ಧ ಯಾವ ಬ್ಯಾಟಿಂಗ್‌ ವಿಭಾಗ ಆಡಿತ್ತೋ ಅದೇ ಬ್ಯಾಟಿಂಗ್‌ ವಿಭಾಗ ಇಂಗ್ಲೆಂಡ್‌ ವಿರುದ್ಧ ರನ್ ಕಲೆಹಾಕಲಿದೆ.

ಉಭಯ ತಂಡಗಳು

ಭಾರತ ತಂಡ: ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮತ್ತು ವರುಣ್ ಚಕ್ರವರ್ತಿ.

ಇಂಗ್ಲೆಂಡ್ ತಂಡ: ಫಿಲ್ ಸಾಲ್ಟ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್ (ನಾಯಕ), ಜಾಕೋಬ್ ಬೆಥೆಲ್, ಟಾಮ್ ಬ್ಯಾಂಟನ್, ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಲಿಯಾಮ್ ಡಾಸನ್, ಆದಿಲ್ ರಶೀದ್, ಲ್ಯೂಕ್ ವುಡ್ ಮತ್ತು ಸಾಕಿಬ್ ಮಹಮೂದ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:46 pm, Wed, 1 July 26

Source link

Leave a Reply

Your email address will not be published. Required fields are marked *