ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯವನ್ನು ಇಂಗ್ಲೆಂಡ್ 27 ರನ್ಗಳಿಂದ ಗೆದ್ದುಕೊಳ್ಳುವ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಈ ಮೂಲಕ ಇಂಗ್ಲೆಂಡ್ ಟಿ20 ಸರಣಿ ಜೊತೆಗೆ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಈ ಪಂದ್ಯದಲ್ಲಿ ಬೆನ್ ಡಕೆಟ್ ಅವರ ಶತಕ ಸೇರಿದಂತೆ ಸ್ಫೋಟಕ ಬ್ಯಾಟಿಂಗ್ ಮತ್ತು ಸ್ಯಾಮ್ ಕರನ್ ಅವರ ಅದ್ಭುತ ಸ್ಪೆಲ್ ಇಂಗ್ಲೆಂಡ್ ಗೆಲುವಿಗೆ ಕಾರಣವಾಯಿತು. ರೋಹಿತ್ ಶರ್ಮಾ ಅವರ ಐತಿಹಾಸಿಕ ಶತಕ ಕೂಡ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ. ಇದರೊಂದಿಗೆ, 2018 ರ ನಂತರ ಮೊದಲ ಬಾರಿಗೆ ಇಂಗ್ಲೆಂಡ್, ಭಾರತದ ವಿರುದ್ಧದ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿತು.
ಬೆನ್ ಡಕೆಟ್
ಇಂಗ್ಲೆಂಡ್ ಪರ ಬೆನ್ ಡಕೆಟ್ ಮತ್ತು ಜಾಕೋಬ್ ಬೆಥೆಲ್ ಉತ್ತಮ ಆರಂಭ ನೀಡಿದರು . ಈ ಜೋಡಿ ಮೊದಲ ವಿಕೆಟ್‌ಗೆ 192 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡಿತು. ಜಾಕೋಬ್ ಬೆಥೆಲ್ 93 ಎಸೆತಗಳಲ್ಲಿ 91 ರನ್ ಗಳಿಸಿ ಔಟಾದರು. ಅವರ ಈ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ ಮತ್ತು 2 ಸಿಕ್ಸರ್‌ಗಳು ಸೇರಿದ್ದವು. ನಂತರ ಜೊತೆಯಾದ ಬೆನ್ ಡಕೆಟ್ ಮತ್ತು ಜೋ ರೂಟ್ ಭಾರತೀಯ ಬೌಲರ್‌ಗಳ ಮೇಲೆ ವಾರಿ ನಡೆಸಿದರು. ಈ ಜೋಡಿ 80 ಎಸೆತಗಳಲ್ಲಿ 101 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡಿತು.
ಕೊನೆಯಲ್ಲಿ ಅಬ್ಬರಿಸಿದ ಬಟ್ಲರ್
ಈ ಸಮಯದಲ್ಲಿ, ಬೆನ್ ಡಕೆಟ್ ಶತಕ ಕೂಡ ಪೂರೈಸಿದರು. ಅಂತಿಮವಾಗಿ ಡಕೆಟ್ 135 ಎಸೆತಗಳಲ್ಲಿ 18 ಬೌಂಡರಿ ಮತ್ತು 1 ಸಿಕ್ಸರ್‌ಗಳೊಂದಿಗೆ 141 ರನ್‌ಗಳಿಸಿ ಔಟಾದರು. ಜೋ ರೂಟ್ ಒಂದು ಕಡೆ ತಾಳ್ಮೆಯಿಂದ ಬ್ಯಾಟಿಂಗ್ ಮಾಡಿ ಅರ್ಧಶತಕವನ್ನೂ ಸಿಡಿಸಿದರು. ಆದರೆ ನಾಯಕ ಹ್ಯಾರಿ ಬ್ರೂಕ್ 12 ಎಸೆತಗಳಲ್ಲಿ 14 ರನ್ ಗಳಿಸಿ ಔಟಾದರು. ಕೊನೆಯಲ್ಲಿ ಬಟ್ಲರ್ 13 ಎಸೆತಗಳಲ್ಲಿ 41 ರನ್ ಬಾರಿಸಿ ಇಂಗ್ಲೆಂಡ್ ತಂಡವನ್ನು ದಾಖಲೆಯ ಮೊತ್ತಕ್ಕೆ ಕೊಂಡೊಯ್ದರು.
Published On – 12:03 am, Mon, 20 July 26