IND vs ENG: ಭಾರತಕ್ಕೆ ಹ್ಯಾಟ್ರಿಕ್ ಸೋಲು; ಟಿ20 ಸರಣಿ ಗೆದ್ದ ಇಂಗ್ಲೆಂಡ್‌ – Kannada News | England Crushes India in Bristol T20 by 9 Wickets, Secures Series 3 0

ಬ್ರಿಸ್ಟಲ್‌ನಲ್ಲಿ ನಡೆದ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಟಿ20 ಪಂದ್ಯವನ್ನು ಆತಿಥೇಯ ಇಂಗ್ಲೆಂಡ್‌ 9 ವಿಕೆಟ್​ಗಳಿಂದ ಗೆದ್ದುಕೊಂಡಿತು. ಸರಣಿಯಲ್ಲಿ ಜೀವಂತವಾಗಿ ಉಳಿಯಲು ಟೀಂ ಇಂಡಿಯಾ ಈ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಆದರೆ ತಂಡದ ಕಳಪೆ ಬ್ಯಾಟಿಂಗ್‌ ಈ ಪಂದ್ಯದಲ್ಲೂ ಮುಂದುವರೆದ ಕಾರಣ, ಶ್ರೇಯಸ್ ಅಯ್ಯರ್ ಪಡೆ ಏಕಪಕ್ಷೀಯವಾಗಿ ಸೋಲೊಪ್ಪಿಕೊಂಡಿತು. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯನ್ನು ಇಂಗ್ಲೆಂಡ್‌ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ವಶಪಡಿಸಿಕೊಂಡಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ, ಶ್ರೇಯಸ್ ಅಯ್ಯರ್ ಅವರ ಅರ್ಧಶತಕದ ನೆರವಿನಿಂದ 158 ರನ್​ಗಳ ಸಾಧಾರಣ ಮೊತ್ತ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಕೇವಲ 1 ವಿಕೆಟ್ ಕಳೆದುಕೊಂಡು 14ನೇ ಓವರ್​ನಲ್ಲೇ ಗೆಲುವಿನ ದಡ ಮುಟ್ಟಿತು.

Source link

Leave a Reply

Your email address will not be published. Required fields are marked *