ಭಾರತ ಹಾಗೂ ಇಂಗ್ಲೆಂಡ್ ನಡುವೆ ಪ್ರಸ್ತುತ ಐದು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಈ ಸರಣಿ ಮುಗಿದ ಬೆನ್ನಲ್ಲೇ ಉಭಯ ತಂಡಗಳು 3 ಪಂದ್ಯಗಳ ಏಕದಿನ ಸರಣಿಯನ್ನು ಆಡಲಿವೆ. ಜುಲೈ 14 ರಿಂದ ಆರಂಭವಾಗಲಿರುವ ಈ ಏಕದಿನ ಸರಣಿಗೆ ಬಿಸಿಸಿಐ ಈಗಾಗಲೇ ಶುಭ್ಮನ್ ಗಿಲ್ ನಾಯಕತ್ವದಲ್ಲಿ 15 ಸದಸ್ಯರ ಬಲಿಷ್ಠ ಟೀಂ ಇಂಡಿಯಾವನ್ನು ಪ್ರಕಟಿಸಿದೆ. ಇದೀಗ ಆತಿಥೇಯ ಇಂಗ್ಲೆಂಡ್ ಕೂಡ ಏಕದಿನ ಸರಣಿಗೆ ತನ್ನ ತಂಡವನ್ನು ಪ್ರಕಟಿಸಿದೆ.
ಈ ಏಕದಿನ ತಂಡವನ್ನು ಹ್ಯಾರಿ ಬ್ರೂಕ್ ಮುನ್ನಡೆಸುತ್ತಿದ್ದು, ಈ ಸರಣಿಗೆ ಒಟ್ಟು 16 ಸದಸ್ಯರ ಬಲಿಷ್ಠ ಇಂಗ್ಲೆಂಡ್ ತಂಡವನ್ನು ಆಯ್ಕೆ ಮಾಡಲಾಗಿದೆ.
ಏಕದಿನ ಸರಣಿಗೆ ಇಂಗ್ಲೆಂಡ್ ತಂಡ: ಹ್ಯಾರಿ ಬ್ರೂಕ್, ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಟಾಮ್ ಬ್ಯಾಂಟನ್, ಜಾಕೋಬ್ ಬೆಥೆಲ್, ಜೋಸ್ ಬಟ್ಲರ್, ಜೇಮ್ಸ್ ಕೋಲ್ಸ್, ಸ್ಯಾಮ್ ಕರನ್, ಲಿಯಾಮ್ ಡಾಸನ್, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಸಕಿಬ್ ಮಹಮೂದ್, ಆದಿಲ್ ರಶೀದ್, ಜೋ ರೂಟ್ ಮತ್ತು ಜೋಶ್ ಟಂಗ್.
ಏಕದಿನ ಸರಣಿ ವೇಳಾಪಟ್ಟಿ
ಮೊದಲ ಏಕದಿನ ಪಂದ್ಯ- ಎಡ್ಜ್‌ಬಾಸ್ಟನ್, ಜುಲೈ 14
ಎರಡನೇ ಏಕದಿನ ಪಂದ್ಯ- ಕಾರ್ಡಿಫ್, ಜುಲೈ 16
ಮೂರನೇ ಏಕದಿನ ಪಂದ್ಯ- ಲಾರ್ಡ್ಸ್, ಜುಲೈ 19
ಭಾರತ ತಂಡ: ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ*, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ಡಬ್ಲ್ಯುಕೆ), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್.