ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟಿ20 ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಈ ರದ್ದಾಗುವಿಕೆ ನಡುವೆ ಹಲವು ದಾಖಲೆಗಳು ನಿರ್ಮಾಣವಾಗಿದೆ. ಅಂದರೆ ಈ ಪಂದ್ಯದಲ್ಲಿ ಮೊದಲ ಇನಿಂಗ್ಸ್ ಆಡಿದ ಭಾರತೀಯ ಬ್ಯಾಟರ್ಗಳು ಕೆಲ ಭರ್ಜರಿ ದಾಖಲೆಗಳನ್ನು ನಿರ್ಮಿಸಿದ್ದಾರೆ. ಆ ದಾಖಲೆಗಳ ಪಟ್ಟಿ ಇಲ್ಲಿದೆ… (PC: BCCI)
ಮೊದಲ ನಾಯಕ: ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ 47 ಎಸೆತಗಳಲ್ಲಿ 68 ರನ್ ಬಾರಿಸಿದ್ದರು. ಈ ಮೂಲಕ ಇಂಗ್ಲೆಂಡ್ನಲ್ಲಿ ಟಿ20 ಕ್ರಿಕೆಟ್ನಲ್ಲಿ ಅರ್ಧಶತಕ ಸಿಡಿಸಿದ ಭಾರತದ ಮೊದಲ ನಾಯಕನೆಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: BCCI)
ಸ್ಫೋಟಕ ಫಿಫ್ಟಿ: ಈ ಮ್ಯಾಚ್ನಲ್ಲಿ ಅಭಿಷೇಕ್ ಶರ್ಮಾ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಮೂಲಕ ಅಂತಾರಾಷ್ಟ್ರೀಯ ಟಿ20 ಇತಿಹಾಸದಲ್ಲಿ 5 ಬಾರಿ 20 ಅಥವಾ ಅದಕ್ಕಿಂತ ಕಡಿಮೆ ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ವಿಶ್ವದ ಮೊದಲ ಪೂರ್ಣ ಪ್ರಮಾಣದ ಐಸಿಸಿ ಸದಸ್ಯ ರಾಷ್ಟ್ರದ ಬ್ಯಾಟರ್ ಎನಿಸಿಕೊಂಡಿದ್ದಾರೆ. (PC: BCCI)
ನೂರು ಸಿಕ್ಸರ್: ಈ ಪಂದ್ಯದಲ್ಲಿ ಬಾರಿಸಿದ 4 ಸಿಕ್ಸರ್ಗಳೊಂದಿಗೆ ಅಭಿಷೇಕ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ನೂರು ಸಿಕ್ಸರ್ಗಳನ್ನು ಪೂರೈಸಿದ್ದಾರೆ. ಈ ಮೂಲಕ ಅತೀ ಕಡಿಮೆ ಎಸೆತಗಳಲ್ಲಿ 100 ಸಿಕ್ಸ್ ಸಿಡಿಸಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್ ಎವಿನ್ ಲೂಯಿಸ್ (789 ಎಸೆತಗಳು) ಹೆಸರಿನಲ್ಲಿತ್ತು. ಇದೀಗ 785 ಎಸೆತಗಳಲ್ಲಿ 100 ಸಿಕ್ಸ್ ಬಾರಿಸಿ ಅಭಿಷೇಕ್ ಶರ್ಮಾ ಹೊಸ ಇತಿಹಾಸ ನಿರ್ಮಿಸಿದ್ದಾರೆ. (PC: BCCI)
ಸ್ಟ್ರೈಕಿಂಗ್ ಸರದಾರ: ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ 245.83ರ ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸಿದ್ದರು. ಈ ಮೂಲಕ 200+ ಸ್ಟ್ರೈಕ್ ರೇಟ್ನಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ 13 ಅರ್ಧಶತಕಗಳೊಂದಿಗೆ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನದಲ್ಲಿದ್ದರೆ, ಇದೀಗ 9 ಸ್ಫೋಟಕ ಹಾಫ್ ಸೆಂಚುರಿಯೊಂದಿಗೆ ಅಭಿಷೇಕ್ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ. (PC: BCCI)
ಕೀಪರ್ ವಿಶ್ವ ದಾಖಲೆ: ಈ ಪಂದ್ಯದಲ್ಲಿ ಜೋಸ್ ಬಟ್ಲರ್ 1 ಸ್ಟಂಪಿಂಗ್ ಮತ್ತು 2 ರನ್ ಔಟ್ಗಳಲ್ಲಿ ಭಾಗಿಯಾಗಿದ್ದರು. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 100 ಡಿಸ್ಮಿಸಲ್ಗಳನ್ನು (Dismissals) ಪೂರೈಸಿದ ವಿಶ್ವದ ಕೇವಲ 2ನೇ ವಿಕೆಟ್ಕೀಪರ್ ಎಂಬ ಐತಿಹಾಸಿಕ ದಾಖಲೆ ಬರೆದರು. ಈ ಪಟ್ಟಿಯಲ್ಲಿ 117 ಡಿಸ್ಮಿಸಲ್ಗಳನ್ನು ಹೊಂದಿರುವ ಸೌತ್ ಆಫ್ರಿಕಾದ ಕ್ವಿಂಟನ್ ಡಿಕಾಕ್ ಅಗ್ರಸ್ಥಾನದಲ್ಲಿದ್ದಾರೆ. (PC: Gary Day/AP)
